ಉ.ಪ್ರ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!
Team Udayavani, Oct 25, 2021, 10:30 PM IST
ಲಕ್ನೋ:ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ. ವರೆಗಿನ ವೈದ್ಯಕೀಯ ಚಿಕಿತ್ಸೆ ಉಚಿತವಾಗಿ ನೀಡಲಾಗುತ್ತದೆ. ಹೀಗೆಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಘೋಷಿಸಿದ್ದಾರೆ.
ಕೋವಿಡ್ ಅವಧಿಯಲ್ಲಿ ಮತ್ತು ಈಗ ಜ್ವರ ಹರಡುವ ಸಮಯದಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಉತ್ತರ ಪ್ರದೇಶದ ಆರೋಗ್ಯ ವ್ಯವಸ್ಥೆಯ ಶಿಥಿಲ ಸ್ಥಿತಿಯನ್ನು ಎಲ್ಲರೂ ನೋಡಿದ್ದಾರೆ. ಉತ್ತಮ ಮತ್ತು ಅಗ್ಗದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು, ಪ್ರಣಾಳಿಕೆ ಸಮಿತಿಯ ಒಪ್ಪಿಗೆಯೊಂದಿಗೆ, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರವು ಯಾವುದೇ ರೋಗದ ಚಿಕಿತ್ಸೆಗಾಗಿ 10 ಲಕ್ಷ ರೂ.ಗಳವರೆಗೆ ನೆರವು ನೀಡಲು ನಿರ್ಧರಿಸಿದೆ,” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೊಸ ಭರವಸೆ ನೀಡಿದ್ದಾರೆ.
ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ರೈತರ ಸಾಲ ಮನ್ನಾ ಮಾಡುವ ಜತೆ ಭತ್ತ ಮತ್ತು ಗೋಧಿಯನ್ನು ಕ್ವಿಂಟಾಲ್‌ಗೆ 2500 ರೂ.ನಂತೆ, ಕಬ್ಬನ್ನು ಕ್ವಿಂಟಾಲ್‌ಗೆ 400 ರೂ.ನಂತೆ ಖರೀದಿಸಲಾಗುವುದು.
ಇದನ್ನೂ ಓದಿ:ನೀಟ್-ಪಿಜಿ ಕೌನ್ಸೆಲಿಂಗ್ ಪ್ರಕ್ರಿಯೆ ಮತ್ತಷ್ಟು ವಿಳಂಬ
20 ಲಕ್ಷ ಜನರಿಗೆ ಉದ್ಯೋಗ ನೀಡುವುದಾಗಿ ಹೇಳಿರುವ ಕಾಂಗ್ರೆಸ್, ವಿದ್ಯುತ್ ಬಿಲ್‌ನ್ನು ಅರ್ಧಕ್ಕೆ ಇಳಿಸುವುದಾಗಿ ಹೇಳಿದೆ. ಜತೆಗೆ ಕೋವಿಡ್ ಬಿಕ್ಕಟ್ಟಿನಿಂದ ಆರ್ಥಿಕ ತೊಂದರೆಗೆ ಸಿಲುಕಿರುವ ಕುಟುಂಬಗಳಿಗೆ 25,000 ರೂ. ನೀಡುವುದಾಗಿಯೂ ಪಕ್ಷ ಹೇಳಿದೆ.
12ನೇ ತರಗತಿ ಪಾಸ್ ಆದ ವಿದ್ಯಾರ್ಥಿನಿಯರಿಗೆ ಉಚಿತ ಮೊಬೈಲ್ ಹಾಗೂ ಪದವಿ ಪಾಸ್ ಆದ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಇ-ಸ್ಕೂಟರ್ ಕೊಡಲಾಗುವುದು ಎಂದು ಪ್ರಿಯಾಂಕಾ ಆಶ್ವಾಸನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.