ಗೋವಾದಲ್ಲಿ ಬದಲಾವಣೆ ತರಬೇಕಾದರೆ ಕಾಂಗ್ರೆಸ್ ಗೆಲ್ಲಿಸಿ: ಪ್ರಿಯಾಂಕಾ ಗಾಂಧಿ
Team Udayavani, Dec 11, 2021, 4:35 PM IST
ಪಣಜಿ: ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರವೇ ಗೋವಾದ ಸಂಸ್ಕೃತಿ ರಕ್ಷಣೆಯಾಗಲಿದೆ, ಗೋವನ್ನರ ಧ್ವನಿ ಉಳಿಯಲಿದೆ, ಗೋವನ್ನರ ಕೈಯಲ್ಲಿ ಗೋವಾ ಉಳಿಯಲಿದೆ. ಕಾಂಗ್ರೆಸ್ ಪಕ್ಷವು ಜನರ ಧ್ವನಿಯನ್ನು ಗುರುತಿಸುತ್ತದೆ. ಕಾಂಗ್ರೆಸ್ ಪಕ್ಷವು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದು ಗೋವಾದ ಜನರ ಹಿತ ಕಾಪಾಡಲು ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನುಡಿದರು.
ಗೋವಾ ವಾಸ್ಕೊದ ಚಿಕಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು- ಸಮಾಜಕ್ಕಿಂತ ತಮ್ಮ ಪಕ್ಷವನ್ನು ದೊಡ್ಡದಾಗಿಸಬೇಕು ಎಂಬ ಮನಸ್ಥಿತಿಯ ಅನೇಕ ಪಕ್ಷಗಳು ಗೋವಾಕ್ಕೆ ಬಂದಿವೆ. ಗೋವಾದಲ್ಲಿ ಬದಲಾವಣೆ ತರಬೇಕಾದರೆ, ಅಭಿವೃದ್ಧಿ ಬೇಕಾದರೆ ಪ್ರಾಮಾಣಿಕವಾಗಿ ಕೆಲಸ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಪ್ರಿಯಾಂಕಾ ಗಾಂಧಿ ಜನತೆಯ ಬಳಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ರಾಜ್ಯ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್ ಮಾತನಾಡಿ- ನಮಗೆ ಬಂಗಾಳಿ ಪಕ್ಷ ಬೇಡ, ದೆಹಲಿ ಪಕ್ಷವೂ ಬೇಡ. ರಾಜ್ಯ ಬಿಜೆಪಿ ಸರ್ಕಾರ ಜನರ ಧ್ವನಿಯನ್ನು ಹತ್ತಿಕ್ಕುತ್ತಿದೆ. ಮುಂದಿನ ಸರ್ಕಾರ ಕಾಂಗ್ರೆಸ್ ಸರ್ಕಾರ ಎಂದರು.
ಈ ಸಂದರ್ಭದಲ್ಲಿ ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್, ಕಾಂಗ್ರೆಸ್ ರಾಷ್ಟ್ರೀಯ ನಾಯಕ ಪಿ.ಚಿದಂಬರಂ, ಗೋವಾ ಕಾಂಗ್ರೆಸ್ ಪ್ರದೇಶಾಧ್ಯಕ್ಷ ಗಿರೀಶ್ ಚೋಡಣಕರ್, ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.