ಸಿಎಂ ನಿವಾಸದ ಗೋಡೆ ಮೇಲೆ ಬಿಜೆಪಿ ಬೆಂಬಲಿಸಿ ಬರಹ
Team Udayavani, Dec 28, 2019, 11:33 PM IST
ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿಯ ಅಧಿಕೃತ ನಿವಾಸ “ವರ್ಷಾ’ದ ಒಳಗೋಡೆಗಳ ಮೇಲೆ ಬಿಜೆಪಿ ಬೆಂಬಲಿಸಿ ಕೆಲವೊಂದು ಸಾಲುಗಳನ್ನು ಬರೆದಿರುವುದು ಬೆಳಕಿಗೆ ಬಂದಿದೆ. ಬಿಳಿ ಗೋಡೆಗಳ ಮೇಲೆ “ಉದ್ಧವ್ ಠಾಕ್ರೆ ಕೀಳು ಮನುಷ್ಯ’, “ಬಿಜೆಪಿ ರಾಕ್ಸ್’ ಎಂದೆಲ್ಲ ಬರೆಯ ಲಾಗಿದೆ. ಮಲಬಾರ್ ಹಿಲ್ಸ್ ಪ್ರದೇಶದಲ್ಲಿರುವ ಈ ಬಂಗ್ಲೆ ಯನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಳೆದ ತಿಂಗಳಷ್ಟೇ ತೊರೆದಿದ್ದರು. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇನ್ನೂ ಅಧಿಕೃತ ನಿವಾಸಕ್ಕೆ ಹೋಗಿ ನೆಲೆಸಿಲ್ಲ. ಆದರೂ ಈ ರೀತಿಯ ಬರಹಗಳು ಗೋಡೆ ಮೇಲೆ ಮೂಡಿರುವುದನ್ನು ಶಿವಸೇನೆ ಮತ್ತು ಕಾಂಗ್ರೆಸ್ ಖಂಡಿಸಿವೆ. ಅಧಿಕೃತ ನಿವಾಸ ಯಾರ ಖಾಸಗಿ ಸ್ವತ್ತೂ ಅಲ್ಲ. ಈ ಕುರಿತ ತನಿಖೆಯಾಗಲೇ ಬೇಕು ಎಂದು ಕಾಂಗ್ರೆಸ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್ ಸಿಂಗ್?
Punjalakatte: ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Anandapura: ಅಪರಿಚಿತ ವ್ಯಕ್ತಿಯ ಶವ ಪತ್ತೆ
India- China border: ಭಾರತದ ಗಡಿಯಲ್ಲಿ ಚೀನ ದುಸ್ಸಾಹಸ !
Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್ ಶವವಾಗಿ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.