Liquor Policy Case: ಬೆಳ್ಳಂಬೆಳಗ್ಗೆ ಆಪ್ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ಇಡಿ ದಾಳಿ
Team Udayavani, Oct 4, 2023, 8:11 AM IST
ನವದೆಹಲಿ: ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ಬುಧವಾರ ಬೆಳಿಗ್ಗೆ ದಾಳಿ ನಡೆಸಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ಸಿಂಗ್ ಅವರ ನಿವಾಸದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎನ್ನಲಾಗಿದ್ದು. ಇಡಿ ಅಧಿಕಾರಿಗಳ ತಂಡ ಮನೆಯಲ್ಲಿ ದಾಖಲೆ ಪತ್ರಗಳನ್ನು ಶೋಧ ನಡೆಸುತ್ತಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಸಂಸದರಿಗೆ ಆಪ್ತರಾಗಿರುವ ಹಲವರ ಮನೆಗಳ ಮೇಲೂ ದಾಳಿ ನಡೆಸಿ ಶೋಧಕಾರ್ಯ ನಡೆಸಲಾಗಿತ್ತು ಎನ್ನಲಾಗಿದೆ.
ಸಂಜಯ್ ಸಿಂಗ್ ನಿವಾಸದ ಮೇಲೆ ಇಡಿ ಅಡೈಕ್ರಿಗಳು ನಡೆಸಿರುವ ವಿಡಿಯೋಗಳನ್ನು ಸುದ್ದಿ ಸಂಸ್ಥೆ ಎಎನ್ ಐ ಹಂಚಿಕೊಂಡಿದೆ.
ಮದ್ಯ ನೀತಿ ಪ್ರಕರಣದಲ್ಲಿ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಸಂಜಯ್ ಸಿಂಗ್ ಹೆಸರನ್ನು ಉಲ್ಲೇಖಿಸಲಾಗಿತ್ತು.
ಮಂಗಳವಾರ, ದೆಹಲಿಯ ನ್ಯಾಯಾಲಯವು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಲೋಕಸಭಾ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ್ ಮಾಗುಂಟ ಮತ್ತು ದೆಹಲಿ ಮೂಲದ ಉದ್ಯಮಿ ದಿನೇಶ್ ಅರೋರಾ ಅವರಿಗೆ ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಅರೋರಾ ಅವರು ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿಕಟ ಸಹಚರರಾಗಿದ್ದರು, ಅವರು ಮದ್ಯ ನೀತಿ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ ಮತ್ತು ಇಡಿ ಮತ್ತು ಸಿಬಿಐನಿಂದ ಬಂಧಿಸಲ್ಪಟ್ಟಿದ್ದರು.
ಭ್ರಷ್ಟಾಚಾರ ಆರೋಪದ ಕುರಿತು ಸಿಬಿಐ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಶಿಫಾರಸು ಮಾಡಿದ ನಂತರ ಮದ್ಯ ನೀತಿಯನ್ನು ರದ್ದುಗೊಳಿಸಲಾಯಿತು.
ಇದನ್ನೂ ಓದಿ: Horoscope Today: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ವಿಭಾಗ ಬದಲಾವಣೆ ಸಂಭವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.