ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
Team Udayavani, Nov 19, 2024, 10:00 PM IST
ನವದೆಹಲಿ: ಮಣಿಪುರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದು, ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದಾರೆ.
“ಮಣಿಪುರದ ವಿಷಯದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ 2 ಸಹ ಸೋತಿವೆ. ಹೀಗಾಗಿ ನೀವು ಮಧ್ಯಪ್ರವೇಶಿಸಿ ಮಣಿಪುರವನ್ನು ರಕ್ಷಿಸಬೇಕು. ಮಣಿಪುರದ ಜನ ತಮ್ಮ ಮನೆಗಳಲ್ಲಿ ನಿರ್ಭೀತಿಯಿಂದ ಜೀವನ ಮಾಡುವ ಸ್ಥಿತಿಯನ್ನು ನಿರ್ಮಾಣ ಮಾಡಿಕೊಡಬೇಕು’ ಎಂದು ಮನವಿ ಮಾಡಿದ್ದಾರೆ.
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಮಹಿಳೆಯರೂ ಸೇರಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಪ್ರಧಾನಿ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡುತ್ತಿಲ್ಲ. ಹೀಗಾಗಿ ಸಂವಿಧಾನದ ರಕ್ಷಕರಾದ ನೀವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.