ದೆಹಲಿ ಜಾಮಾ ಮಸೀದಿ ಎದುರು ಬೃಹತ್ ಪ್ರತಿಭಟನೆ : ಪ್ರವಾದಿ ವಿರುದ್ಧ ಹೇಳಿಕೆಗೆ ಖಂಡನೆ
ಮಸೀದಿಯಿಂದ ಪ್ರತಿಭಟನೆಗೆ ಕರೆ ನೀಡಿಲ್ಲ, ಅವರು ಓವೈಸಿಯ ಜನರು ಎಂದ ಇಮಾಮ್
Team Udayavani, Jun 10, 2022, 3:10 PM IST
ನವದೆಹಲಿ: ಪ್ರವಾದಿ ಮೊಹಮ್ಮದ್ ಅವರ ಕುರಿತಾಗಿ ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಮತ್ತು ಉಚ್ಛಾಟಿತ ನಾಯಕ ನವೀನ್ ಜಿಂದಾಲ್ ಅವರ ಪ್ರಚೋದನಕಾರಿ ಹೇಳಿಕೆಗಳ ವಿರುದ್ಧ ದೆಹಲಿಯ ಜಾಮಾ ಮಸೀದಿ ಎದುರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಪ್ರಾರ್ಥನೆಯ ಬಳಿಕ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಮುಸ್ಲಿಮರು ಪ್ರತಿಭಟನೆ ಆರಂಭಿಸಿದ್ದಾರೆ. ಪ್ರವಾದಿ ವಿರುದ್ದದ ಹೇಳಿಕೆಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇದೆ ವೇಳೆ ಮಸೀದಿಯಿಂದ ಪ್ರತಿಭಟನೆಗೆ ಕರೆ ನೀಡಿಲ್ಲ ಎಂದು ಜಾಮಾ ಮಸೀದಿಯ ಶಾಹಿ ಇಮಾಮ್ ಹೇಳಿದ್ದಾರೆ.ಪ್ರತಿಭಟಿಸುವವರು ಯಾರೆಂದು ನಮಗೆ ತಿಳಿದಿಲ್ಲ, ಅವರು ಎಐಎಂಐಎಂಗೆ ಸೇರಿದವರು ಅಥವಾ ಓವೈಸಿಯವರ ಜನರು ಎಂದು ನಾನು ಭಾವಿಸುತ್ತೇನೆ. ಅವರು ಬಯಸಿದರೆ, ಅವರು ಪ್ರತಿಭಟಿಸಬಹುದು, ಆದರೆ ನಾವು ಅವರನ್ನು ಬೆಂಬಲಿಸುವುದಿಲ್ಲ ಎಂದು ನಾವು ಸ್ಪಷ್ಟಪಡಿಸಿದ್ದೇವೆ ಎಂದಿದ್ದಾರೆ.
ಪ್ರತಿಭಟನಾ ನಿರತರನ್ನು ಸ್ಥಳದಿಂದ ಪೊಲೀಸರು ತೆರವು ಮಾಡಿದ್ದು, ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.