Subhas Sarkar: ಸಚಿವರನ್ನೇ ಕಚೇರಿಯಲ್ಲಿ ಕೂಡಿ ಹಾಕಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು
Team Udayavani, Sep 13, 2023, 9:26 AM IST
ಪಶ್ಚಿಮ ಬಂಗಾಳ: ಸಚಿವರೊಬ್ಬರನ್ನು ಪಕ್ಷದ ಕಾರ್ಯಕರ್ತರೇ ಅವರ ಕಚೇರಿಯಲ್ಲಿ ಕೂಡಿ ಹಾಕಿದ ಘಟನೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ನಡೆದಿದೆ.
ಮಂಗಳವಾರ (ಸೆ.12 ರಂದು) ಬಿಜೆಪಿ ಕಾರ್ಯಕರ್ತರು ಕೇಂದ್ರ ಸಚಿವ ಸುಭಾಸ್ ಸರ್ಕಾರ್ ಅವರನ್ನು ಕಚೇರಿಯಲ್ಲಿ ಬೀಗ ಹಾಕಿ ಕೂಡಿ ಹಾಕಿದ್ದಾರೆ.
ಜಿಲ್ಲಾ ಘಟಕದ ಆಡಳಿತದಲ್ಲಿ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಪಕ್ಷದ ಕಾರ್ಯಕರ್ತರು ಆರೋಪಿಸಿ ಈ ರೀತಿ ಮಾಡಿದ್ದಾರೆ.
ರಾಜ್ಯದಲ್ಲಿ ಶಿಕ್ಷಣ ಸಚಿವರಾಗಿರವ, ಬಂಕುರಾದ ಸಂಸದರಾಗಿರುವ ಸುಭಾಸ್ ಸರ್ಕಾರ್ ಅವರು ಮಂಗಳವಾರ ಮಧ್ಯಾಹ್ನ ತನ್ನ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಕಾರ್ಯಕರ್ತರ ಗುಂಪು ಘೋಷಣೆಗಳನ್ನು ಕೂಗುತ್ತಾ ಪ್ರವೇಶ ಮಾಡಿದ್ದಾರೆ. ಸಚಿವರನ್ನು ಅವರ ಕಚೇರಿಯಲ್ಲಿ ಕೂಡಿ ಹಾಕಿ ಹೊರಗಿನಿಂದ ಬೀಗ ಹಾಕಿ ಅವರ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
ಸುಭಾಸ್ ಸರ್ಕಾರ್ ಒಬ್ಬ “ಅಸಮರ್ಥ” ಅವರು ಕಷ್ಟಪಟ್ಟು ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರಿಗೆ ಮಹತ್ವ ನೀಡಿಲ್ಲ. ಕೇಂದ್ರ ಸಚಿವರು ತಮಗೆ ಆಪ್ತರಾಗಿರುವವರನ್ನು ಜಿಲ್ಲಾ ಸಮಿತಿಗೆ ಸದಸ್ಯರನ್ನಾಗಿ ನೇಮಿಸಿದ್ದಾರೆ ಎಂದು ಪ್ರತಿಭಟನಾಕಾರರಲ್ಲಿ ಒಬ್ಬರಾದ ಮೋಹಿತ್ ಶರ್ಮಾ ಆರೋಪಿಸಿದ್ದಾರೆ.
ಅವರ ಅಧ್ಯಕ್ಷತೆಯಿಂದಾಗಿ ಈ ಬಾರಿ ಬಂಕುರಾ ಪುರಸಭೆಯಲ್ಲಿ ಬಿಜೆಪಿಗೆ ಯಾವುದೇ ಸ್ಥಾನ ಸಿಗಲಿಲ್ಲ. ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಎರಡು ವಾರ್ಡ್‌ಗಳನ್ನು ಗೆದ್ದಿತ್ತು. ಈ ಬಾರಿ ಪಂಚಾಯಿತಿಯ ಹಲವು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಾಧ್ಯವಾಗಲಿಲ್ಲ. ಇದು ನಾಚಿಕೆಗೇಡಿನ ಸಂಗತಿ’ʼ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.
ಈ ವೇಳೆ ಬಿಜೆಪಿ ಕಾರ್ಯಕರ್ತರ ಮತ್ತೊಂದು ಗುಂಪು ಪಕ್ಷದ ಕಚೇರಿಗೆ ತಲುಪಿದ್ದು, ಗೊಂದಲದ ನಡುವೆಯೇ ಉಭಯ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು.
ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪಕ್ಷದ ಕಚೇರಿಗೆ ಧಾವಿಸಿ ಸರ್ಕಾರ್ ಅವರನ್ನು ಹೊರಗೆ ಕರೆತಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಬಿಜೆಪಿ ವಕ್ತಾರ ಸಮಿಕ್ ಭಟ್ಟಾಚಾರ್ಯ ಘಟನೆ ದುರದೃಷ್ಟಕರ ಎಂದು ಬಣ್ಣಿಸಿದ್ದು, ಪ್ರತಿಭಟನಾನಿರತ ಪಕ್ಷದ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಈ ಘಟನೆಯ ವೀಡಿಯೊವನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಟ್ವೀಟ್ ಮಾಡಿದೆ, ಇದು ಬಿಜೆಪಿಯನ್ನು ಅವರ “ಅಂತರ್ ಕಲಹ” ಎಂದು ಲೇವಡಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.