ಎರಡನೇ ದಿನವೂ ಸಾಗಿದ ಪುಲ್ವಾಮಾ ಎನ್‌ಕೌಂಟರ್‌: 3ನೇ ಉಗ್ರನ ಹತ್ಯೆ

Team Udayavani, Jul 4, 2017, 11:44 AM IST

Encounter1-700.jpg

ಶ್ರೀನಗರ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಮಂಗಳವಾರ ನಡೆದಿರುವ ಎರಡನೇ ದಿನದ ಎನ್‌ಕೌಂಟರ್‌ನಲ್ಲಿ ಇನ್ನೋರ್ವ ಉಗ್ರ ಭದ್ರತಾ ಪಡೆಗಳ ಗುಂಡಿಗೆ ಹತನಾಗಿದ್ದಾನೆ. ಇನ್ನಷ್ಟು ಉಗ್ರರು ಇಲ್ಲಿ ಅಡಗಿಕೊಂಡಿರುವುದನ್ನು ಶಂಕಿಸಲಾಗಿರುವುದರಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ. 

ಎಎನ್‌ಐ ವರದಿ ಪ್ರಕಾರ ಹತ ಉಗ್ರನ ಮೃತ ದೇಹವು ಬಹಮ್‌ನೂ ಪ್ರದೇಶದಲ್ಲಿ ಪತ್ತೆಯಾಗಿದ್ದು ಅದನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದೇ ಪ್ರದೇಶದಲ್ಲಿ ನಡೆದ ಸಂಘರ್ಷದಲ್ಲಿ ಸುಮಾರು 10 ಮಂದಿ ಪ್ರತಿಭಟನಕಾರರು ಗಾಯಗೊಂಡಿರುವುದಾಗಿ ವರದಿಯಾಗಿದೆ. 

ಎರಡು ದಿನಗಳ ಎನ್‌ಕೌಂಟರ್‌ನಲ್ಲಿ ಈ ವರೆಗೆ ಒಟ್ಟು ಮೂವರು ಉಗ್ರರು ಹತರಾಗಿರುವುದಾಗಿ ಪೊಲೀಸ್‌ ಅಧಿಕಾರಿಯೋರ್ವರು ಪಿಟಿಐಗೆ ತಿಳಿಸಿದ್ದಾರೆ. 

ಪುಲ್ವಾಮಾ ಜಿಲ್ಲೆಯ ಬಹಮ್‌ನೂ ಪ್ರದೇಶದಲ್ಲಿ ಮನೆಯೊಂದರಲ್ಲಿ ಉಗ್ರರು ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ನಿನ್ನೆ ಸೋಮವಾರ ಎನ್‌ಕೌಂಟರ್‌ ಆರಂಭಿಸಿದ್ದವು. ಇಬ್ಬರು ಉಗ್ರರು ಎನ್‌ಕೌಂಟರ್‌ನಲ್ಲಿ ನಿನ್ನೆಯೇ ಹತರಾಗಿದ್ದರು. ಇಂದು ಮೂರನೇ ಉಗ್ರನೂ ಹತನಾಗಿದ್ದಾನೆ.

ಹತರಾಗಿರುವ ಈ ಉಗ್ರರೆಲ್ಲರೂ ಭಯೋತ್ಪಾದಕ ಸಂಘಟನೆಗೆ ಹೊಸದಾಗಿ ನೇಮಕಗೊಂಡವರಾಗಿದ್ದಾರೆ ಎಂದು ಭದ್ರತಾ ಪಡೆಗಳು ಶಂಕಿಸಿವೆ. 

ನಿನ್ನೆ ಹತರಾಗಿದ್ದ ಇಬ್ಬರು ಉಗ್ರರನ್ನು ಕಿಯಾಫ‌ತ್‌ ಮತ್ತು ಜಹಾಂಗೀರ್‌ ಎಂದು ಗುರುತಿಸಲಾಗಿದ್ದು ಇವರು ಉಗ್ರ ಝಾಕೀರ್‌ ಮೂಸಾ ಸಮೂಹಕ್ಕೆ ಸೇರಿದವರೆಂದು ತಿಳಿದು ಬಂದಿದೆ. 

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.