ಪುಲ್ವಾಮಾ ಭಯೋತ್ಪಾದಕ ದಾಳಿ ರೂವಾರಿ; ಜೈಶ್ ಉಗ್ರ ಸೈಫುಲ್ಲಾ ಎನ್ ಕೌಂಟರ್ ನಲ್ಲಿ ಹತ್ಯೆ
ರೌಫ್ ಅಝರ್ ಹಾಗೂ ಅಮ್ಮಾರ್ ಜತೆ ನಿಕಟ ಸಂಪರ್ಕ ಹೊಂದಿದ್ದ ಎಂದು ವರದಿ ತಿಳಿಸಿದೆ.
Team Udayavani, Jul 31, 2021, 3:39 PM IST
ನವದೆಹಲಿ: ಭದ್ರತಾ ಪಡೆಯ ಎನ್ ಕೌಂಟರ್ ನಲ್ಲಿ 2019ರ ಪುಲ್ವಾಮಾ ಭಯೋತ್ಪಾದಕ ದಾಳಿ ರೂವಾರಿಗಳಲ್ಲಿ ಒಬ್ಬನಾದ ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಅಬು ಸೈಫುಲ್ಲಾ ಅಲಿಯಾಸ್ ಲಂಬೂ ಹತ್ಯೆಗೀಡಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ಶನಿವಾರ(ಜುಲೈ 31) ನಡೆದಿದೆ.
ಇದನ್ನೂ ಓದಿ:45 ವರ್ಷ ರಾಷ್ಟ್ರೀಯ ಪಕ್ಷದ ಕಾರ್ಯಕರ್ತನಾಗಿದ್ದಕ್ಕೆ ಬಿಎಸ್ ವೈಗೆ ತೃಪ್ತಿಯಿದೆ: ರಾಘವೇಂದ್ರ
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನಿವಾಸಿಯಾಗಿರುವ ಸೈಫುಲ್ಲಾ 2019ರಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಯ ರೂವಾರಿಗಳಲ್ಲಿ ಒಬ್ಬನಾಗಿದ್ದ. ಈ ಘಟನೆಯಲ್ಲಿ 40 ಮಂದಿ ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಈ ದಾಳಿ ನಡೆಸಲು ಸೈಫುಲ್ಲಾ ಐಇಡಿಯನ್ನು ತಯಾರಿಸಿಕೊಟ್ಟಿರುವುದಾಗಿ ವರದಿ ತಿಳಿಸಿದೆ.
ಸೈಫುಲ್ಲಾ ಜೈಶ್ ಉಗ್ರಗಾಮಿ ಸಂಘಟನೆ ಸ್ಥಾಪಕ ಮೌಲಾನಾ ಮಸೂದ್ ಅಝರ್ ನ ಸಂಬಂಧಿಯಾಗಿದ್ದು, ಸೈಫುಲ್ಲಾ 2017ರಲ್ಲಿ ಭಾರತಕ್ಕೆ ನುಸುಳಿ ಬಂದ ಮೇಲೆ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದಾಗಿ ವರದಿ ವಿವರಿಸಿದೆ.
ಸೈಫುಲ್ಲಾ ಪುಲ್ವಾಮಾ ಸೇರಿದಂತೆ ಹಲವಾರು ಭಯೋತ್ಪಾದಕ ದಾಳಿಯಲ್ಲಿ ಶಾಮೀಲಾಗಿದ್ದ. ಈತ ಪಾಕಿಸ್ತಾನದ ಮೂಲದ ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಸ್ಥಾಪಕನಾದ ಮೌಲಾನಾ, ರೌಫ್ ಅಝರ್ ಹಾಗೂ ಅಮ್ಮಾರ್ ಜತೆ ನಿಕಟ ಸಂಪರ್ಕ ಹೊಂದಿದ್ದ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.