ಪಂಜಾಬ್‌ನಲ್ಲಿ ಮಾತಿನ ಪಂಚ್
Team Udayavani, Jan 28, 2017, 3:45 AM IST
ಮಜೀತಾ: ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಪಂಜಾಬ್‌ನಲ್ಲಿ ಕಾಂಗ್ರೆಸ್‌ಗೆ ಕ್ಯಾಪ್ಟನ್ ಸಿಕ್ಕಿದ್ದಾರೆ. ಶಿರೋಮಣಿ ಅಕಾಲಿದಳದ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ಮಜೀತಾದಲ್ಲಿ ಚುನಾವಣಾ ಪ್ರಚಾರ ನಡೆಸಿದ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಒಂದು ವೇಳೆ ಕಾಂಗ್ರೆಸ್ ಗೆದ್ದರೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಘೋಷಿಸಿದ್ದಾರೆ.
ಇದು ಅವರ ಕಡೆಯ ಚುನಾವಣೆಯಾಗಿದ್ದು, ಈ ಬಾರಿ ಕಾಂಗ್ರೆಸ್‌ಗೆ ವೋಟ್ ಹಾಕಿ. ಅಕಾಲಿದಳ ಸರ್ಕಾರ ಕೆಟ್ಟ ಆಡಳಿತ ನಡೆಸಿದ್ದು ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ. ಇದರ ಜತೆಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಹರಿಹಾಯ್ದ ರಾಹುಲ್, ಭ್ರಷ್ಟಾಚಾರ ಕಡೆಗಣಿಸುವ ಮಾತುಗಳನ್ನಾಡುತ್ತಿರುವವರು, ಇಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಶಿರೋಮಣಿ ಅಕಾಲಿ ದಳದೊಂದಿಗೆ ದೋಸ್ತಿ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಪ್ರಧಾನಿ ಮೋದಿ
ಜಲಂಧರ್: ಬೆಳಗ್ಗೆ ರಾಹುಲ್ ಗಾಂಧಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದರೆ, ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಎನ್‌ಡಿಎ ಅಭ್ಯರ್ಥಿಗಳ ಪರ ಜಲಂಧರ್‌ನಲ್ಲಿ ಭರ್ಜರಿ ರ್ಯಾಲಿ ನಡೆಸಿದರು. ಕಾಂಗ್ರೆಸ್ ಮುಳುಗುತ್ತಿರುವ ಹಡಗಾಗಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಮತ ಹಾಕಲು ಹೋಗಬೇಡಿ. ಹಿಂದೆ ನೀಡಿದ್ದ ಭರವಸೆಗಳನ್ನೇ ಅವರು ಈಡೇರಿಸಿಲ್ಲ ಎಂದರು. ಸಟ್ಲೆàಜ್ ಕಾಲುವೆಯ ವಿವಾದವನ್ನು ಪ್ರಸ್ತಾಪಿಸಿ, ಈ ನದಿಯಿಂದ ಪಾಕ್‌ನತ್ತ ಹೋಗುವಾಗ ನೀರನ್ನು ಬಳಸಿಕೊಳ್ಳುವ ಹಕ್ಕುಗಳು ಪಂಜಾಬ್‌ಗಿದೆ ಎಂದರು.
ಮುಗಿಯದ ಸೀಟಿನ ಹಗ್ಗಜಗ್ಗಾಟ
ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಮೈತ್ರಿ ಮಾಡಿಕೊಂಡಿವೆಯಷ್ಟೇ, ಆದರೆ ಇನ್ನೂ ಸೀಟು ಹಂಚಿಕೆಯ ಹಗ್ಗಜಗ್ಗಾಟ ಮುಗಿದೇ ಇಲ್ಲ. ರಾಯ್‌ಬರೇಲಿ ಮತ್ತು ಅಮೇಥಿಯ ಎಲ್ಲ 10 ವಿಧಾನಸಭಾ ಕ್ಷೇತ್ರಗಳು ತನಗೇ ಬೇಕು ಎಂಬುದು ಕಾಂಗ್ರೆಸ್‌ನ ಬೇಡಿಕೆ. ಆದರೆ ಈಗಾಗಲೇ ಎಸ್ಪಿ ಈ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ 5 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಮೈತ್ರಿ ಘೋಷಣೆಯಾದ ಮೇಲೆ ಈ ಅಭ್ಯರ್ಥಿಗಳ ಹೆಸರನ್ನು ವಾಪಸ್ ತೆಗೆದುಕೊಳ್ಳಬಹುದು ಎಂದೇ ಹೇಳಲಾಗಿತ್ತು. ಆದರೆ ಇದುವರೆಗೂ ಎಸ್ಪಿ ಈ ನಿರ್ಧಾರ ತೆಗೆದುಕೊಳ್ಳದೇ ಇರುವುದು ಸ್ಥಳೀಯ ಕಾಂಗ್ರೆಸ್ ಮುಖಂಡರ ಆತಂಕಕ್ಕೆ ಕಾರಣವಾಗಿದೆ.
ಪಂಜಾಬ್ ಚುನಾವಣೆಯ ಪ್ರಚಾರದ ಕಾವು ಹೆಚ್ಚುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪರಸ್ಪರ ವಾಗ್ಧಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಪ್ರಧಾನಿ, ಇಲ್ಲಿ ಶಿರೋಮಣಿ ಅಕಾಲಿ ದಳದ ಸ್ನೇಹ ಬೆಳೆಸಿದ್ದು ಏಕೆ ಎಂಬುದು ರಾಹುಲ್ ಪ್ರಶ್ನೆ. ಹಾಗೆಯೇ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದಿದ್ದು ಮೋದಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.