![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 13, 2022, 2:54 PM IST
ಚಂಡೀಗಢ : ಟ್ರೇಲರ್ ವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಮಧ್ಯದಲ್ಲೇ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಂಢೀಗಡದಲ್ಲಿ ಸಂಭವಿಸಿದೆ.
ಫಗ್ವಾರಾ ಮತ್ತು ಚಂಡೀಗಢವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅಪಘಾತದ ಭೀಕರತೆಯನ್ನು ತೋರಿಸುವಂತಿದೆ.
ಸಿಸಿ ಟಿವಿ ದೃಶ್ಯಾವಳಿ ಕಂಡಂತೆ 18 ಚಕ್ರದ ಟ್ರೈಲರ್ ಚಾಲಕ ವಾಹನವನ್ನು ತಿರುವಿನಲ್ಲಿ ನಿಧಾನಗೊಳಿಸದೆ ತಿರುವು ಪಡೆದಿದ್ದಾನೆ ಈ ವೇಳೆ ವಾಹನ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಲ್ಲೇ ಉರುಳಿ ಬಿದ್ದಿದೆ ದುರಾದೃಷ್ಟವೆಂಬಂತೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ಕಾರಿನ ಮೇಲೆಯೇ ಬಿದ್ದಿದೆ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಜೀವಕಳೆದುಕೊಂಡಿದ್ದಾರೆ. ಅದೃಷ್ಟವಶಾತ್ ಇನ್ನೊಂದು ಕಾರು ಸ್ವಲ್ಪದರಲ್ಲೇ ಪಾರಾಗಿದೆ.
ಟ್ರೈಲರ್ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ವಸ್ತುಗಳೆಲ್ಲಾ ಚಲ್ಲಾಪಿಲ್ಲಿಯಾಗಿ ಬಿದ್ದಿದೆ, ಅಲ್ಲದೆ ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
3 killed in Punjab road accident. A loaded trailer loses balance, crushes car. Caught on CCTV camera. #Punjab #Accident pic.twitter.com/ArbkhkehIO
— The Viral Finder (@TheViralFinder) September 13, 2022
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.