ರೈತರಿಗೆ ಬೆಂಬಲ ಸೂಚಿಸಿ ರಾಜಿನಾಮೆ ಸಲ್ಲಿಸಿದ ಪಂಜಾಬ್ ಡಿಐಜಿ
Team Udayavani, Dec 13, 2020, 5:10 PM IST
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ರೈತರಿಗೆ ಬೆಂಬಲವಾಗಿ ಪಂಜಾಬ್ ಡಿಐಜಿ (ಕಾರಾಗೃಹ) ಲಖ್ಮಿಂದರ್ ಸಿಂಗ್ ಜಖರ್ ತಮ್ಮ ಸೇವೆಗೆ ರಾಜೀನಾಮೆ ನೀಡಿದ್ದಾರೆ.
ವರದಿಗಳ ಪ್ರಕಾರ, ಪಂಜಾಬ್ ಡಿಐಜಿ ಲಖ್ಮಿಂದರ್ ಸಿಂಗ್ ಜಖರ್ ಅವರು ರಾಜೀನಾಮೆ ಪತ್ರವನ್ನು ಪಂಜಾಬ್ ಸರ್ಕಾರಕ್ಕೆ ಸಲ್ಲಿಸಿದ್ದು, “ಕೃಷಿ ಕಾನೂನುಗಳ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ನನ್ನ ರೈತ ಸಹೋದರರೊಂದಿಗೆ ನಿಲ್ಲುವ ನನ್ನ ನಿರ್ಧಾರವನ್ನು ನಾನು ನಿಮಗೆ ತಿಳಿಸಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.
ದೆಹಲಿ ಗಡಿ ಭಾಗದಲ್ಲಿ ಕಳೆದ 18 ದಿನಗಳಿಂದ ಪಂಜಾಬ್, ಹರ್ಯಾಣ ಮತ್ತು ಇತರ ರಾಜ್ಯಗಳ ರೈತರು ಹೋರಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ: ದೇಶ-ವಿದೇಶಗಳಲ್ಲಿ 30,000 ಗಂಟೆ ಉಪನ್ಯಾಸ ಪ್ರವಚನಗೈದ ದಾಖಲೆ: ಬನ್ನಂಜೆ ಸಾಧನೆಯ ಹಾದಿ !
ಇದಕ್ಕೂ ಮೊದಲು ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ತಮ್ಮ ಪದ್ಯವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದರು. ಎಸ್ಎಡಿ ಮುಖಂಡ ಸುಖ್ ದೇವ್ ಸಿಂಗ್ ಕೂಡ ರೈತ ಹೋರಾಟ ಬೆಂಬಲಿಸಿ ಪದ್ಮ ಭೂಷಣ ಪ್ರಶಸ್ತಿ ಹಿಂದಿರುಗಿಸುವುದಾಗಿ ಘೋಷಿಸಿದ್ದರು.
ಮಾತ್ರವಲ್ಲದೆ ಪಂಜಾಬ್ ನ ಹಲವು ಅಂತರಾಷ್ಟ್ರೀಯ ಕ್ರೀಡಾಪಟುಗಳು ರೈತರಿಗೆ ಬೆಂಬಲ ಸೂಚಿಸಿ ತಮಗೆ ಸಿಕ್ಕಿರುವ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ತೀವ್ರಗೊಂಡ ಲಾಲೂ ಪ್ರಸಾದ್ ಯಾದವ್ ಕಿಡ್ನಿ ಸಮಸ್ಯೆ: ಶೇ.25% ಮಾತ್ರ ಕಾರ್ಯ; ವೈದ್ಯರ ಮಾಹಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.