ತರಕಾರಿ ಅಂಗಡಿಯನ್ನು ಕಾಲಿನಿಂದ ಒದ್ದು ದರ್ಪ ಮೆರೆದ ಪೊಲೀಸ್ ಅಧಿಕಾರಿ : ಅಮಾನತು
Team Udayavani, May 7, 2021, 9:53 AM IST
ನವದೆಹಲಿ : ಪಂಜಾಬಿನ ಫಗ್ವಾರ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬ ತರಕಾರಿ ಮಾರಾಟ ಮಳಿಗೆಯನ್ನು ಕಾಲಿನಿಂದ ಜಾಡಿಸಿರುವ ಘಟನೆ ನಡೆದಿದ್ದು, ಆ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಫಗ್ವಾರ್ ಸ್ಟೇಷನ್ ಹೌಸ್ ಆಫೀಸರ್ ನವದೀಪ್ ಸಿಂಗ್ ತರಕಾರಿ ಅಂಗಡಿಯನ್ನು ಕಾಲಿನಿಂದ ಜಾಡಿಸಿ ದರ್ಪ ತೋರಿರುವ ಅಧಿಕಾರಿ. ಪೊಲೀಸ್ ಅಧಿಕಾರಿಯ ಈ ದರ್ಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಕಾರಣವಾಗಿದೆ.
ಇನ್ನು ನವದೀಪ್ ಸಿಂಗ್ ಮೇಲೆ ಕಠಿಣ ಕ್ರಮ ಕೈಗೊಂಡಿರುವ ಪಂಜಾಬ್ ಪೊಲೀಸ್ ಡೈರೆಕ್ಟರ್ ಜನರಲ್ ದಿನಕರ್ ಗುಪ್ತ, ನವದೀಪ್ ಅವರನ್ನು ಅಮಾನತು ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದು, ನಾಚಿಕೆಗೇಡು, ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾನು ಫಗ್ವಾರಾ ಎಸ್ ಎಚ್ ಒ ಅವರನ್ನು ಅಮಾನತುಗೊಳಿಸಿದ್ದೇನೆ. ಅಂತಹ ಅಧಿಕಾರ ದುರುಪಯೋಗವನ್ನು ಸಹಿಸುವುದಿಲ್ಲ ಎಂದಿದ್ದಾರೆ.
ಪಂಜಾಬ್ ನಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದು, ಈ ವೇಳೆ ಗಸ್ತು ತಿರುಗುತ್ತಿದ್ದ ಅಧಿಕಾರಿ ನವದೀಪ್ ತರಕಾರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಅಂಗಡಿಯನ್ನು ಜಾಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪೊಲೀಸ್ ಅಧಿಕಾರಿಯ ಮೇಲೆ ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
Uddhav Thackeray: ಚಂದ್ರಚೂಡ್ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು
Uttar Pradesh: ಹಳಿ ಮೇಲೆ ಸಿಮೆಂಟ್ ಕಲ್ಲಿಟ್ಟು ರೈಲು ಹಳಿತಪ್ಪಿಸಲು ಪ್ರಯತ್ನ
MUST WATCH
ಹೊಸ ಸೇರ್ಪಡೆ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.