ನ್ಯಾಯಾಧೀಶರಂತೆ ಪೋಸ್ ಕೊಟ್ಟು ಉದ್ಯೋಗ ಕೊಡುವ ಭರವಸೆ; ಲಕ್ಷ ಲಕ್ಷ ಲೂಟಿ; ಪೊಲೀಸ್, ಪತ್ನಿ ಬಂಧನ
Team Udayavani, Jan 10, 2023, 8:44 AM IST
ಚಂಡಿಗಢ: ನ್ಯಾಯಾಧೀಶರಂತೆ ಪೋಸ್ ಕೊಟ್ಟು ಯುವಕರಿಗೆ ಉದ್ಯೋಗ ಹುಡುಕಿ ಕೊಡುತ್ತೇವೆ ಎಂದು ಸುಳ್ಳು ಹೇಳಿ ಹಣ ಪಡೆದು ವಂಚಿಸುತ್ತಿದ್ದ ಪೊಲೀಸ್ ಅಧಿಕಾರಿ ಹಾಗೂ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾನಸಾ ಜೈಲಿನಲ್ಲಿ ಉಪ ಅಧೀಕ್ಷಕರಾಗಿದ್ದ ನರಪಿಂದರ್ ಸಿಂಗ್ (41), ಪತ್ನಿ ದೀಪ್ ಕಿರಣ್ (35) ಇಬ್ಬರೂ ಲೂಧಿಯಾನ ನಿವಾಸಿಗಳು. ಬಂಧಿತರಿಂದ ನಾಮಫಲಕವುಳ್ಳ ಮೂರು ಪೊಲೀಸ್ ಸಮವಸ್ತ್ರ, ನಾಮಫಲಕವುಳ್ಳ ಮಹಿಳಾ ಕಾನ್ಸ್ ಸ್ಟೇಬಲ್ ಸಮವಸ್ತ್ರ,10 ಖಾಲಿ ಪೊಲೀಸ್ ನೇಮಕಾತಿ ಅರ್ಜಿಗಳು, 1 ಲಕ್ಷ ರೂ. ನಗದು, ಚಿನ್ನದ ಸರ,ಚಿನ್ನದ ಉಂಗುರ ಮತ್ತು ಎರಡು ಕಾರುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್ ಅಧಿಕಾರಿಯಾಗಿದ್ದ ನರಪಿಂದರ್ ಸಿಂಗ್ ಮತ್ತು ಪತ್ನಿ ದೀಪ್ ಕಿರಣ್ ಇಬ್ಬರು ನ್ಯಾಯಾಧೀಶರಂತೆ ಪೋಸ್ ಕೊಟ್ಟು ಉದ್ಯೋಗವಿಲ್ಲದವರಿಗೆ ಉದ್ಯೋಗ ನೀಡುತ್ತೇವೆ. ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ನೀಡುವ ಭರವಸೆಯನ್ನು ಕೊಟ್ಟು, ಯುವಜನರಿಂದ ಹಣ ಪಡೆಯುತ್ತಿದ್ದರು. ಒಂದೊಂದು ಪ್ರಕರಣಕ್ಕೆ 8-10 ಲಕ್ಷ ರೂ.ಪಡೆಯುತ್ತಿದ್ದರು. ಉದ್ಯೋಗ ನೀಡುವ ಭರವವಸೆ ಕೊಟ್ಟು, ಉದ್ಯೋಗ ಅಕಾಂಕ್ಷಿಗಳಿಗೆ ವಂಚನೆ ಮಾಡುತ್ತಿದ್ದರು ಎಂದು ಲೂಧಿಯಾನ ಪೊಲೀಸ್ ಕಮಿಷನರ್ ಮನದೀಪ್ ಸಿಂಗ್ ಸಿಧು ಹೇಳಿದ್ದಾರೆ.
ಈ ಬಗ್ಗೆ ಮೋತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ, ತನಿಖೆ ನಡೆಸಿ ಇಬ್ಬರನ್ನು ಬಂಧಿಲಾಗಿದೆ. ಈ ಪ್ರಕರಣದಲ್ಲಿ ಸಾಥ್ ಕೊಟ್ಟ ಇಬ್ಬರು ಸಹಚರರಾದ ಲಖ್ವಿಂದರ್ ಸಿಂಗ್ ಮತ್ತು ಸುಖದೇವ್ ಸಿಂಗ್ ತಲೆಮರೆಸಿಕೊಂಡಿದ್ದು, ಅವರನ್ನು ಹಿಡಿಯಲು ಪೊಲೀಸ್ ತಂಡಗಳು ದಾಳಿ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.