ಕೋವಿಡ್ ಭೀತಿ : 5,8,10ನೇ ತರಗತಿ ಪರೀಕ್ಷೆ ರದ್ದು ಪಡಿಸಿದ ಪಂಜಾಬ್ ಸರ್ಕಾರ
Team Udayavani, Apr 15, 2021, 3:29 PM IST
ಚಂಡೀಗಢ : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ 5,8 ಹಾಗೂ 10 ನೇ ತರಗತಿಯ ಪರೀಕ್ಷೆಗಳನ್ನು ರದ್ದು ಪಡಿಸಿ ಪಂಜಾಬ್ ಸರ್ಕಾರ ಆದೇಶ ಹೊರಡಿಸಿದೆ.
ಕೈಮೀರಿ ಹಬ್ಬುತ್ತಿರುವ ಮಹಾಮಾರಿ ಕೋವಿಡ್ ಪಿಡುಗಿನ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸರಿಯಲ್ಲ. ಪರೀಕ್ಷೆಗಳನ್ನು ರದ್ದು ಮಾಡಬೇಕೆನ್ನುವ ಕೂಗು ವಿದ್ಯಾರ್ಥಿಗಳ ಪೋಷಕರಿಂದ ಕೇಳಿ ಬಂದಿತ್ತು. ಈ ಹಿನ್ನೆಲೆ ಇಂದು ( ಏಪ್ರಿಲ್ 15) ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನೇತೃತ್ವದಲ್ಲಿ ಶಿಕ್ಷಣ ತಜ್ಞರ ಸಭೆ ಕರೆಯಲಾಗಿತ್ತು.
ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿಗಳು, ಕೋವಿಡ್ ಹಿನ್ನೆಲೆ ರಾಜ್ಯದ 5, 8 ಹಾಗೂ 10ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇನ್ನು ಈಗಾಗಲೇ ರಾಜ್ಯದಲ್ಲಿ 12 ನೇ ತರಗತಿಯ ಪರೀಕ್ಷೆಗಳ ದಿನಾಂಕವನ್ನು ಮುಂದೂಡಲಾಗಿದೆ. ಮುಂದಿನ ಸ್ಥಿತಿಗತಿಗೆ ಅನುಗುಣವಾಗಿ ನಿರ್ಣಯ ಕೈಗೊಳ್ಳಲಾಗುವುದು. 11 ರಿಂದ 20 ವಯಸ್ಸಿನವರಲ್ಲಿ ಕೋವಿಡ್ ಪ್ರಮಾಣ ಕಡಿಮೆ ಮಾಡುವ ಉದ್ದೇಶದಲ್ಲಿ ಈಗಾಗಲೇ ರಾಜ್ಯದಲ್ಲಿ ಏಪ್ರಿಲ್ 30ರ ವರೆಗೆ ಎಲ್ಲ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಇನ್ನು ಕೆಲ ದಿನಗಳ ಹಿಂದೆಯಷ್ಟೆ ವಿದ್ಯಾರ್ಥಿಗಳ ಪರೀಕ್ಷೆ ವಿಚಾರದ ಕುರಿತು ಕೇಂದ್ರ ಶಿಕ್ಷಣ ಸಚಿವರಿಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪತ್ರ ಬರೆದಿದ್ದರು. ಬುಧವಾರಷ್ಟೆ ಸಿಬಿಎಸ್‍ಇಯ ಹತ್ತನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೆ ಇದೀಗ ಪಂಜಾಬ್ ಕೂಡ ಪರೀಕ್ಷೆಗಳನ್ನು ಕ್ಯಾನ್ಸಲ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.