Miya Muslims ಹೇಳಿಕೆ; ಅಸ್ಸಾಂ ಸಿಎಂ ಹಿಮಂತ ವಿರುದ್ಧ ಸಿಬಲ್ ಆಕ್ರೋಶ
Team Udayavani, Aug 28, 2024, 12:02 PM IST
ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಅವರ ‘ಮಿಯಾ ಮುಸ್ಲಿಮರು ರಾಜ್ಯವನ್ನು ಸ್ವಾಧೀನಪಡಿಸಿಕೊಳ್ಳಲು ಬಿಡುವುದಿಲ್ಲ’ ಎಂಬ ಹೇಳಿಕೆ ಶುದ್ಧ ಕೋಮು ವಿಷ, ಇಂತಹ ಹೇಳಿಕೆಗೆ ಮೌನ ಉತ್ತರವಲ್ಲ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಬುಧವಾರ ಆಕ್ರೋಶ ಹೊರ ಹಾಕಿದ್ದಾರೆ.
ನಾಗಾಂವ್‌ನಲ್ಲಿ 14 ವರ್ಷದ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಲು ವಿಪಕ್ಷಗಳು ಮಂಡಿಸಿದ ಮುಂದೂಡಿಕೆ ನಿರ್ಣಯಗಳ ಅಂಗೀಕಾರದ ಕುರಿತು ಮಂಗಳವಾರ ವಿಧಾನಸಭೆಯಲ್ಲಿ ಮಾತನಾಡಿದ ಹಿಮಂತ ಬಿಸ್ವಾ ಶರ್ಮ ‘ಮಿಯಾ ಮುಸ್ಲಿಮರು ಅಸ್ಸಾಂ ಅನ್ನು ಆಕ್ರಮಿಸಿಕೊಳ್ಳಲು ಬಿಡುವುದಿಲ್ಲ” ಎಂದು ಕಿಡಿ ಕಾರಿದ್ದರು.
ಹೇಳಿಕೆ ಕುರಿತು X ನಲ್ಲಿ ಪ್ರತಿಕ್ರಿಯಿಸಿದ ಸಿಬಲ್ “ಹಿಮಂತ ಹೇಳಿಕೆ ಶುದ್ಧ ಕೋಮು ವಿಷ. ಇದಕ್ಕೆ ಮೌನ ಉತ್ತರವಲ್ಲ” ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಮಿಯಾ’ ಎಂಬ ಪದವನ್ನು ಬೆಂಗಾಲಿ ಮಾತನಾಡುವ ಮುಸ್ಲಿಮರಿಗೆ ಅವಹೇಳನಕಾರಿ ಪದವಾಗಿ ಬಳಸಲಾಗುತ್ತಿತ್ತು.ಬಂಗಾಳಿ ಮಾತನಾಡದ ಜನರು ಸಾಮಾನ್ಯವಾಗಿ ಅವರನ್ನು ಬಾಂಗ್ಲಾದೇಶಿ ವಲಸಿಗರು ಎಂದು ಗುರುತಿಸುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಮಿಯಾ ಪದವನ್ನು ಪ್ರತಿಭಟನೆಯ ಸೂಚಕವಾಗಿ ಅಳವಡಿಸಿಕೊಳ್ಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.