ಪುರಿ ಜಗನ್ನಾಥನ ರಥಯಾತ್ರೆ ಆರಂಭ
Team Udayavani, Jul 5, 2019, 5:03 AM IST
ಭುವನೇಶ್ವರ/ಕೋಲ್ಕತಾ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಒಡಿಶಾದ ಪುರಿಯಲ್ಲಿ ಜಗನ್ನಾಥನ ವಾರ್ಷಿಕ ರಥಯಾತ್ರೆಗೆ ಗುರುವಾರ ಚಾಲನೆ ದೊರೆಯಿತು. ಪುರಿ ಜಗನ್ನಾಥ ದೇಗುಲದಿಂದ ಬಲಭದ್ರ, ಜಗನ್ನಾಥ, ದೇವಿ ಸುಭದ್ರೆ ಹಾಗೂ ಸುದರ್ಶನರ ಮೂರ್ತಿಗಳನ್ನು ಹೊತ್ತ ಬೃಹತ್ ರಥಗಳನ್ನು ಮೆರವಣಿಗೆ ಮೂಲಕ ಸಾಗಿಸಲಾಯಿತು. 9 ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ. ಪುರಿ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅವರು ಈ ಎಲ್ಲ ಮೂರ್ತಿಗಳಿಗೂ ಪೂಜೆ ಸಲ್ಲಿಸಿದರು. ಒಡಿಶಾ ಸಿಎಂ ನವೀನ್ ಪಟ್ನಾಯಕ್, ಇತರ ಸಚಿವರು, ಶಾಸಕರು ಹಾಗೂ ಇತರೆ ಗಣ್ಯರು ಸಮಾರಂಭಕ್ಕೆ ಸಾಕ್ಷಿಯಾದರು.
ಸಾಮರಸ್ಯದ ಕರೆ:ಪಶ್ಚಿಮ ಬಂಗಾಲದ ಕೋಲ್ಕತಾದಲ್ಲಿ ಇಸ್ಕಾನ್ ಆಯೋಜಿಸಿದ್ದ ರಥಯಾತ್ರೆಗೆ ಸಿಎಂ ಮಮತಾ ಬ್ಯಾನರ್ಜಿ ಚಾಲನೆ ನೀಡಿದರು. ಟಿಎಂಸಿ ಸಂಸದೆ ನುಸ್ರತ್ ಜಹಾನ್ ಮುಖ್ಯ ಅತಿಥಿಯಾಗಿದ್ದರು. ಅವರ ಪತಿ ನಿಖೀಲ್ ಜೈನ್ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಲ್ಲಿ ಧಾರ್ಮಿಕ ಸಾಮರಸ್ಯಕ್ಕೆ ಕರೆ ನೀಡಿದ ಸಿಎಂ ಮಮತಾ, ‘ಎಲ್ಲ ಧರ್ಮಗಳ ಬಗ್ಗೆಯೂ ಸಹಿಷ್ಣುತೆ ಮತ್ತು ಎಲ್ಲರೂ ಒಂದೇ ಎಂಬ ಭಾವನೆಯೇ ನೈಜ ಧರ್ಮ’ ಎಂದಿದ್ದಾರೆ. ಇದೇ ವೇಳೆ ಮಾತನಾಡಿದ ನುಸ್ರತ್, ‘ರಾಜಕೀಯ ಮತ್ತು ಧರ್ಮವನ್ನು ನಾವು ಬೇರೆ ಬೇರೆಯಾಗಿಯೇ ನೋಡಬೇಕು’ ಎಂದು ಹೇಳಿದ್ದಾರೆ.
ಇನ್ನು, ಗುಜರಾತ್‌ನಲ್ಲಿ ನಡೆದ ರಥ ಯಾತ್ರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕುಟುಂಬ ಸಮೇತರಾಗಿ ಪಾಲ್ಗೊಂಡಿದ್ದಾರೆ. ಇದಕ್ಕೂ ಮುನ್ನ, ಪ್ರಧಾನಿ ನರೇಂದ್ರ ಮೋದಿಯವರು ರಥಯಾತ್ರೆ ಹಿನ್ನೆಲೆಯಲ್ಲಿ ದೇಶದ ಜನತೆಗೆ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.