ವಾಹನಗಳ ಪಿಯುಸಿ ಪ್ರಮಾಣಪತ್ರಕ್ಕೆ ಕ್ಯುಆರ್ ಕೋಡ್!
Team Udayavani, Nov 30, 2020, 6:53 AM IST
ಹೊಸದಿಲ್ಲಿ: ದೇಶದ ಎಲ್ಲ ವ್ಯವಸ್ಥೆಗಳನ್ನು ತಂತ್ರಜ್ಞಾನದ ವ್ಯಾಪ್ತಿಗೆ ತರುತ್ತಿರುವ ಕೇಂದ್ರ ಸರಕಾರವು ಇನ್ನೊಂದು ಪ್ರಮುಖ ಹೆಜ್ಜೆ ಇರಿಸಿದೆ. ವಾಹನಗಳ ಹೊಗೆಯುಗುಳುವಿಕೆ ಮಟ್ಟದ ಪರೀಕ್ಷಾ ಪ್ರಮಾಣಪತ್ರ (ಪೊಲ್ಯೂಷನ್ ಅಂಡರ್ ಕಂಟ್ರೋಲ್-ಪಿಯುಸಿ)ವನ್ನು ದೇಶಾದ್ಯಂತ ಏಕರೂಪಗೊಳಿಸಲು ಚಿಂತನೆ ನಡೆಸಿದೆ.
ಹಾಗೆಯೇ ಅದರಲ್ಲಿ ಕ್ಯುಆರ್ ಕೋಡ್ ಅಳವಡಿಸಲಾಗುತ್ತದೆ. ಅದನ್ನು ಸ್ಕಾ éನ್ ಮಾಡಿ ದರೆ ವಾಹನದ ಮಾಲಕನ ವಿವರ, ಹೊಗೆ ಯುಗುಳುವಿಕೆ ಸ್ಥಿತಿಗತಿ ಮತ್ತಿತರ ಮಾಹಿತಿಗಳು ಸಿಗುತ್ತವೆ. ಈ ಕುರಿತು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಪ್ರಕಟನೆ ಹೊರಡಿಸಿ, ಸಂಬಂಧಿತರ ಅಭಿಪ್ರಾಯ ಕೇಳಿದೆ.
ಲಾಭಗಳೇನು?
ಕ್ಯುಆರ್ ಕೋಡ್ ಇರುವ ಪಿಯುಸಿ ಪ್ರಮಾಣ ಪತ್ರದಲ್ಲಿ ವಾಹನಗಳ ಸಂಪೂರ್ಣ ಮಾಹಿತಿ ಇರುತ್ತದೆ. ಹಾಗೆಯೇ ಯಾರಾದರೂ ವಾಹನವನ್ನು ಕಳವು ಮಾಡಿ ಪಿಯುಸಿ ಪ್ರಮಾಣಪತ್ರ ಪಡೆಯಲು ಹೋದರೆ, ತತ್‌ಕ್ಷಣ ಪತ್ತೆ ಹಚ್ಚಬಹುದು. ಹೊಗೆಯುಗುಳುವಿಕೆ ಪರೀಕ್ಷೆಗೆ ಮುನ್ನವೇ ವಾಹನ ಮಾಲಕನ ಮೊಬೈಲ್ ಸಂಖ್ಯೆಗೆ ಸಂದೇಶ ಬರುವುದರಿಂದ ಇದು ಸಾಧ್ಯವಾಗುತ್ತದೆ.
ಪಿಯುಸಿಯಲ್ಲಿನ ಮಾಹಿತಿ ಒಂದು ಕಡೆ ಶೇಖರವಾಗಿರುತ್ತದೆ. ಅದನ್ನು ರಾಷ್ಟ್ರೀಯ ನೋಂದಣಿಗೆ ಸಂಪರ್ಕಿಸಲಾಗಿರುತ್ತದೆ. ಇದೇ ಮೊದಲ ಬಾರಿಗೆ ಪ್ರಮಾಣಪತ್ರವನ್ನು ತಿರಸ್ಕರಿ ಸುವ ಅವಕಾಶವನ್ನೂ ನೀಡಲಾಗಿದೆ. ಒಂದು ವೇಳೆ ಸಂಬಂಧಪಟ್ಟ ವಾಹನ, ಮೋಟಾರು ವಾಹನಗಳ ನಿಯಮಗಳಿಗೆ ತಕ್ಕಂತೆ ಇಲ್ಲವಾದರೆ ಪರೀಕ್ಷಾ ಕೇಂದ್ರದಲ್ಲಿ ಹೀಗೆ ಮಾಡಲು ಅವಕಾಶವಿದೆ. ಇದಕ್ಕೆ ಸೂಕ್ತ ಕಾರಣವನ್ನು ನಮೂದಿಸಬೇಕಾಗಿರುತ್ತದೆ.
ಶಿಕ್ಷೆಯೇನು?
ಒಂದು ವೇಳೆ ವಾಹನ ಹೊಗೆಯುಗುಳುವಿಕೆ ನಿಯಮಗಳಿಗೆ ಅನುಗುಣವಾಗಿಲ್ಲ ಎಂದು ಅಧಿಕಾರಿಗಳಿಗೆ ಅನಿಸಿದರೆ ಸಂಬಂಧಪಟ್ಟ ವ್ಯಕ್ತಿಗೆ ಯಾವುದೇ ರೂಪದಲ್ಲಿ ಸಂದೇಶ ಕಳುಹಿಸಿ, ವಾಹನವನ್ನು ಪರೀಕ್ಷೆಗೊಳಪಡಿಸಲು ಸೂಚಿಸಬಹುದು. ಇದನ್ನು ಮಾಡಲು ವ್ಯಕ್ತಿ ವಿಫಲವಾದರೆ 3 ತಿಂಗಳವರೆಗೆ ಜೈಲು ಅಥವಾ 10 ಸಾವಿರ ರೂ.ವರೆಗೆ ದಂಡ ವಿಧಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.