NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?
Team Udayavani, Jul 2, 2024, 9:41 PM IST
ನವದೆಹಲಿ: ರದ್ದಾಗಿರುವ ನೀಟ್-ಪಿಜಿ ಪರೀಕ್ಷೆಯನ್ನು ಮುಂದಿನ ತಿಂಗಳ ಮಧ್ಯಭಾಗದಲ್ಲಿ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಈ ಪರೀಕ್ಷೆಯನ್ನು ಜೂನ್ 23ರಂದು ನಿಗದಿಪಡಿಸಲಾಗಿತ್ತು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆ ಆರಂಭದ ಕೆಲವು ಗಂಟೆ ಮುಂಚೆ ರದ್ದು ಮಾಡಲಾಗಿತ್ತು.
ನೀಟ್-ಪಿಜಿ ಪರೀಕ್ಷೆ ಆರಂಭವಾಗುವ 2 ಗಂಟೆ ಮುಂಚೆ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳ ನೀಟ್-ಪಿಜಿ ಪರೀಕ್ಷೆಯ ದಿಢೀರ್ ರದ್ದು ಮಾಡಿದ್ದರಿಂದ ತೊಂದರೆಯಾಗಿತ್ತು. ವಿದ್ಯಾರ್ಥಿಗಳ ಹಿತರಕ್ಷಣೆಯ ದೃಷ್ಟಿಯಿಂದಲೇ ಪರೀಕ್ಷೆ ರದ್ದು ಮಾಡಲಾಗಿತ್ತು ಎಂದು ಸರ್ಕಾರ ತನ್ನ ನಡೆಯನ್ನು ಸಮರ್ಥಿಸಿಕೊಂಡಿತ್ತು.
ಈ ಮಧ್ಯೆ, ನೀಟ್ ಅಕ್ರಮ ಕುರಿತು ಸಾಕಷ್ಟು ಪ್ರತಿಭಟನೆಗಳು ನಡೆದಿವೆ. ಸಿಬಿಐ ತನ್ನ ತನಿಖೆಯನ್ನು ಅಂತಾರಾಜ್ಯಗಳಿಗೆ ವಿಸ್ತರಿಸಿದೆ. ಅಲ್ಲದೇ ಒಬ್ಬರನ್ನು ಬಂಧಿಸಿ ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.