ಸಣ್ಣ ಉದ್ದಿಮೆಗೆ ತ್ವರಿತ ಬಾಕಿ ಪಾವತಿ
Team Udayavani, Aug 26, 2019, 5:00 AM IST
ನವದೆಹಲಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿರುವ 4,000-5,000 ಕೋಟಿ ರೂ. ಪಾವತಿ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಶುಕ್ರವಾರವಷ್ಟೇ ಸಣ್ಣ ಉದ್ಯಮಗಳಿಗೆ ಸರ್ಕಾರದ ರಿಫಂಡ್ ಅನ್ನು ಸರಳಗೊಳಿಸುವ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿರುವ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ. ಮುಂದಿನ 30 ದಿನಗಳಲ್ಲಿ ಎಂಎಸ್‌ಎಂಇಗಳ ಜಿಎಸ್‌ಟಿ ರಿಫಂಡ್ ಮಾಡಲಾಗುತ್ತದೆ ಎಂದು ಅವರು ಘೋಷಿಸಿದ್ದರು.
ಭಾನುವಾರ ಈ ಸಂಬಂಧ ಪರೋಕ್ಷ ತೆರಿಗೆ ಮತ್ತು ಸೀಮಾ ಸುಂಕದ ಕೇಂದ್ರೀಯ ಮಂಡಳಿ ಮತ್ತು ಜಿಎಸ್‌ಟಿ ನೆಟ್ವರ್ಕ್ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ ನಿರ್ಮಲಾ, ದಕ್ಷ ರಿಫಂಡ್ ತಾಂತ್ರಿಕತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಜಿಎಸ್‌ಟಿ ರಿಫಂಡ್ ಮೊತ್ತ ತುಂಬಾ ದೊಡ್ಡದೇನೂ ಅಲ್ಲ. ಆದರೂ ನಾವು ಅದನ್ನು ಶೀಘ್ರ ಪಾವತಿ ಮಾಡುತ್ತೇವೆ ಎಂದು ಅವರು ಈ ವೇಳೆ ಹೇಳಿದ್ದಾರೆ. ಸರ್ಕಾರಿ ಇಲಾಖೆಗಳು ಮತ್ತು ಸರ್ಕಾರಿ ಸ್ವಾಮ್ಯದ ಕಂಪನಿಗಳಿಂದ ಸಣ್ಣ ಉದ್ದಿಮೆಗಳಿಗೆ ಪಾವತಿಯಾಗುವ ಈ ಜಿಎಸ್‌ಟಿ ರಿಫಂಡ್ ಸಣ್ಣ ಉದ್ಯಮಗಳಿಗೆ ಹಣಕಾಸು ದ್ರವ್ಯತೆ ಒದಗಿಸುವಲ್ಲಿ ಅತ್ಯಂತ ಪ್ರಮುಖ ಅಂಶವಾಗಿದೆ. ಹೀಗಾಗಿ ಈ ಸಂಸ್ಥೆಗಳಿಗೆ ಸರ್ಕಾರ ಹಣ ಪಾವತಿ ಬಾಕಿ ಉಳಿಸಿಕೊಂಡಲ್ಲಿ ಆರ್ಥಿಕತೆಯ ಮೇಲೆ ಪರಿಣಾಮ ಬೀರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ISRO: ಜನವರಿ ತಿಂಗಳಲ್ಲಿ 100ನೇ ಉಡಾವಣೆ
Mangaluru: ಅಪರಾಧಿ ಹಿತೇಶ್ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ
BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು
Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್ ಲಸಿಕೆ!
ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.