800 ಅಂಚೆ ಕಚೇರಿಗಳಲ್ಲಿ ಶೀಘ್ರ ಪಾಸ್ಪೋರ್ಟ್ ಕೇಂದ್ರ
Team Udayavani, Jun 14, 2017, 2:11 PM IST
ಭುವನೇಶ್ವರ: ಇನ್ನೆರಡು ವರ್ಷಗಳಲ್ಲಿ ದೇಶಾದ್ಯಂತ 800 ಜಿಲ್ಲೆಗಳ ಪ್ರಧಾನ ಅಂಚೆ ಕಚೇರಿಗಳಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಕೇಂದ್ರ ನಿರ್ಧರಿಸಿದೆ.
ವಿದೇಶಾಂಗ ಖಾತೆ ಸಹಾಯಕ ಸಚಿವ ಜ| ವಿ.ಕೆ. ಸಿಂಗ್ ಅವರೇ ಈ ವಿಚಾರ ತಿಳಿಸಿದ್ದಾರೆ. ಪ್ರಸಕ್ತ ವರ್ಷ 150 ಅಂಚೆ ಕಚೇರಿಗಳಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು. ಇನ್ನೆರಡು ವರ್ಷಗಳಲ್ಲಿ ದೇಶಾದ್ಯಂತದ ಎಲ್ಲ 800 ಜಿಲ್ಲೆಗಳಲ್ಲೂ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ. ದೂರದ ಪ್ರದೇಶಗಳಲ್ಲಿ ಅಥವಾ ಕುಗ್ರಾಮಗಳಲ್ಲಿ ವಾಸಿಸುತ್ತಿರುವವರಿಗೂ ಪಾಸ್‌ಪೋರ್ಟ್ ಸೇವೆ ಸುಲಭ ವಾಗಿ ಎಟುಕಲಿ ಎಂಬ ಉದ್ದೇಶದಿಂದ ಈ ಯೋಜನೆ ಹಾಕಿ ಕೊಳ್ಳಲಾಗಿದೆ. ಪಾಸ್‌ಪೋರ್ಟ್‌ಗಾಗಿ ಯಾರು ಕೂಡ ಬಹಳ ದೂರದವರೆಗೆ ಹೋಗುವಂತಾಗಬಾರದು ಎಂಬುದು ನಮ್ಮ ಅಭಿಲಾಷೆ ಎಂದು ಅವರು ಹೇಳಿದ್ದಾರೆ. ಜತೆಗೆ ಪಾಸ್‌ಪೋರ್ಟ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುವಂತೆ ಮಾಡಲಾಗುವುದು ಮತ್ತು ಈ ಸೇವೆಯಿಂದ ಮಧ್ಯವರ್ತಿಗಳು ದೂರ ಇರುವಂತೆ ನೋಡಿಕೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ
Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ
Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ
TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!
Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.