ಪಾರೀಕರ್ ಮನೇಲಿ ರಫೇಲ್ ಡೀಲ್ ಫೈಲ್;ಸಿಎಂಗೆ ಭದ್ರತೆ ನೀಡಲು ಕೈ ಮನವಿ!
Team Udayavani, Jan 5, 2019, 11:57 AM IST
ನವದೆಹಲಿ:ಗೋವಾ ಮುಖ್ಯಮಂತ್ರಿ ಮನೋಹರ್ ಪಾರೀಕರ್ ಅವರ ಜೀವಕ್ಕೆ ಅಪಾಯವಿದೆ. ಈ ನಿಟ್ಟಿನಲ್ಲಿ ಅವರಿಗೆ ಬಿಗಿ ಭದ್ರತೆ ನೀಡಬೇಕೆಂದು ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಶನಿವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ರಫೇಲ್ ಡೀಲ್ ಫೈಲ್ ಪರ್ರೀಕರ್ ಬೆಡ್ ರೂಂನಲ್ಲಿದೆ?
ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ಇಬ್ಬರು ಸಚಿವರು ಮಾತನಾಡುತ್ತಿರುವ ಆಡಿಯೋ ಕ್ಲಿಪ್ ಬಹಿರಂಗವಾದ ಮೇಲೆ ಕಾಂಗ್ರೆಸ್ ಇಂದು ಸುದ್ದಿಗೋಷ್ಠಿ ನಡೆಸಿ ಸಿಎಂ ಪಾರೀಕರ್ ಗೆ ಭದ್ರತೆ ನೀಡುವಂತೆ ಒತ್ತಾಯಿಸಿ ರಾಷ್ಟ್ರಪತಿಗೆ ಪತ್ರ ಬರೆದಿರುವುದಾಗಿ ಹೇಳಿದೆ.
ರಫೇಲ್ ಡೀಲ್ ಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಬಹಿರಂಗವಾದರೆ, ಡೀಲ್ ನಲ್ಲಿ ನಡೆದಿರುವ ಭ್ರಷ್ಟಾಚಾರ ಸಾಬೀತಾಗುತ್ತದೆ. ಹೀಗಾಗಿ ಯಾರಿಗೆ ಈ ವಿವರ ಬೇಕಾಗಿದೆಯೋ ಅವರು ಇದನ್ನು ಸಾರ್ವಜನಿಕವಾಗಿ ಬಹಿರಂಗವಾಗಲು ಬಿಡಲ್ಲ ಎಂದು ಪತ್ರದಲ್ಲಿ ಕಾಂಗ್ರೆಸ್ ಉಲ್ಲೇಖಿಸಿದೆ.
Letter to @rashtrapatibhvn for enhancing security cover to @manoharparrikar as there is possible threat & attempts can be made to obtain Rafale files from @goacm bedroom in view of VishwajeetRane #RafaleAudioLeak
@INCIndia
@INCGoa pic.twitter.com/1r4KjeIFAo— Girish Chodankar (@girishgoa) January 5, 2019
ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಆಡಿಯೋವನ್ನು ಬಿಡುಗಡೆಗೊಳಿಸಿದ್ದು, ಅದರಲ್ಲಿ ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಅವರು ಕಳೆದ ವಾರ ನಡೆದ ಗೋವಾ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಪಾರೀಕರ್ ಅವರು ರಫೇಲ್ ಡೀಲ್ ಗೆ ಸಂಬಂಧಿಸಿದ ಎಲ್ಲಾ ಫೈಲ್ ಹಾಗೂ ದಾಖಲೆಗಳು ನನ್ನ ಬೆಡ್ ರೂಂನಲ್ಲಿ ಇದೆ ಎಂದು ಹೇಳಿದ್ದಾರೆಂಬ ಮಾತು ದಾಖಲಾಗಿದೆ!
ಈ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರದಲ್ಲಿ ಸಿಎಂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ರಫೇಲ್ ಡೀಲ್ ಗೆ ಸಂಬಂಧಿಸಿದ ಫೈಲ್ಸ್ ಗಳು ಪಾರೀಕರ್ ಮನೆಯಲ್ಲಿದೆ ಎಂಬುದು ಆಡಿಯೋ ಸ್ಪಷ್ಟಪಡಿಸಿದೆ ಎಂದು ಹೇಳಿದ್ದರು.
ಈ ಟೇಪ್ ಕಾಂಗ್ರೆಸ್ ಪ್ರಾಯೋಜಿತ ಎಂದು ಬಿಜೆಪಿ ತಿರುಗೇಟು ನೀಡಿದೆ. ಹತಾಶ ಕಾಂಗ್ರೆಸ್ ಪಕ್ಷ ಕಟ್ಟುಕಥೆಯನ್ನೇ ಸತ್ಯ ಮಾಡಲು ಹೊರಟಿದೆ ಎಂದು ಮನೋಹರ್ ಪಾರೀಕರ್ ಕೂಡಾ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.