ಭಾರತ್ ಜೋಡೊ ಯಾತ್ರೆಯಲ್ಲಿ ರಘುರಾಮ್ ರಾಜನ್; ಬಿಜೆಪಿ ಕೆಂಡ
Team Udayavani, Dec 14, 2022, 8:23 PM IST
ಜೈಪುರ: ಆರ್‌ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆಯಲ್ಲಿ ಸಂಸದ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ. ಬುಧವಾರ ರಾಜಸ್ಥಾನದ ಸವಾಯಿ ಮಾದೋಪುರದಿಂದ ಹೊರಟ ಪಾದಯಾತ್ರೆಯಲ್ಲಿ ರಘುರಾಮ್ ರಾಜನ್ ಜತೆಯಾದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ ಆರಂಭವಾಗಿದೆ.
“ದೇಶವನ್ನು ಒಗ್ಗೂಡಿಸುವ ಯಾತ್ರೆಯ ಪರವಾಗಿ ನಿಲ್ಲುವವರ ಸಂಖ್ಯೆ ಏರಿಕೆಯಾಗುತ್ತಿದೆ. ದ್ವೇಷ ಹರಡುವವರ ವಿರುದ್ಧದ ನಮ್ಮ ಈ ಹೋರಾಟದಲ್ಲಿ ಯಶಸ್ಸು ಗಳಿಸುತ್ತೇವೆ,’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. 2013ರ ಸೆ.4ರಿಂದ 2016ರ ಸೆ.4ರವರೆಗೆ ಆರ್‌ಬಿಐ ಗವರ್ನರ್ ಆಗಿ ರಘುರಾಮ್ ರಾಜನ್ ಕರ್ತವ್ಯ ನಿರ್ವಹಿಸಿದ್ದರು.
ರಾಜನ್ ಮುಂದಿನ ಮನಮೋಹನ್ ಸಿಂಗ್
“ಕಾಂಗ್ರೆಸ್‌ನಿಂದ ನೇಮಕವಾದ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್, ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿರುವ ಬಗ್ಗೆ ಯಾವುದೇ ಅಶ್ಚರ್ಯವಿಲ್ಲ. ಅವರು ತಮ್ಮನ್ನು ತಾವೇ ಮುಂದಿನ ಮನಮೋಹನ್ ಸಿಂಗ್ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಭಾರತದ ಆರ್ಥಿಕತೆಯ ಬಗ್ಗೆ ಅವರ ವ್ಯಾಖ್ಯಾನವನ್ನು ತಿರಸ್ಕರಿಸಬೇಕು. ಇದು ಅವಕಾಶವಾದದಿಂದ ಕೂಡಿದ ತಿರುಚಿದ ಹೇಳಿಕೆಯಾಗಿದೆ,’ ಎಂದು ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
ನಮ್ಮ ಪಕ್ಷಕ್ಕೆ ಮಾನ್ಯತೆ ಸಿಗುತ್ತಿಲ್ಲ, ಸಚಿವ ಸ್ಥಾನ ತೊರೆವೆ: ಮಾಂಜಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Arrested: ರೌಡಿಯ ಕೊಂದು ಸುಟ್ಟು ಹಾಕಿದ್ದ ರೌಡಿಶೀಟರ್ ಸೆರೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ