ತ.ನಾಡಲ್ಲಿ ಶಾ; ಆಂಧ್ರದಲ್ಲಿ ರಾಹುಲ್ ಗುಡುಗು
Team Udayavani, Feb 23, 2019, 12:30 AM IST
ಚೆನ್ನೈ/ಪಾಲಕ್ಕಾಡ್/ತಿರುಪತಿ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ತಮಿಳುನಾಡು ಹಾಗೂ ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಎಐಎಡಿಎಂಕೆ ಜತೆಗೆ ಚುನಾವಣಾ ಮೈತ್ರಿ ಮಾಡಿಕೊಂಡ ಬಳಿಕ ಮೊದಲ ಬಾರಿಗೆ ತಮಿಳುನಾಡಿಗೆ ಭೇಟಿ ನೀಡಿದ ಅವರು, ರಾಮನಾಥಪುರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದಾರೆ. ಡಿಎಂಕೆ -ಕಾಂಗ್ರೆಸ್ ಮೈತ್ರಿ ವಿರುದ್ಧ ಹರಿಹಾಯ್ದ ಅವರು, 2ಜಿ ಸ್ಪೆಕ್ಟ್ರಂನಂಥ ದೊಡ್ಡ ಹಗರಣಗಳನ್ನು ನಡೆಸಿದ ಪಕ್ಷಗಳು ಉತ್ತಮ ಆಡಳಿತ ನೀಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ತದನಂತರ, ಕೇರಳದ ಪಾಲಕ್ಕಾಡ್‌ಗೆ ಭೇಟಿ ನೀಡಿದ ಅವರು, ಶಬರಿಮಲೆ ವಿಚಾರ ಸಂಬಂಧ ಆಡಳಿತಾರೂಢ ಸಿಪಿಎಂ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಸರ್ಕಾರವು ಕೋಟಿಗಟ್ಟಲೆ ಅಯ್ಯಪ್ಪ ಭಕ್ತರಿಗೆ ವಂಚಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇದೆಲ್ಲದರ ಪರಿಣಾಮವನ್ನು ಎದುರಿಸಲೇಬೇಕಾಗುತ್ತದೆ. ಕಮ್ಯೂನಿಸ್ಟ್ ಪಕ್ಷವು ಸದ್ಯದಲ್ಲೇ ತನ್ನ ಅಡಿಪಾಯವನ್ನೇ ಕಳೆದುಕೊಳ್ಳಲಿದೆ ಎಂದಿದ್ದಾರೆ ಶಾ.
ಮೋದಿ ಬಳಿ ಹಣವಿಲ್ಲ: ರೈತರ ಸಾಲ ಮನ್ನಾ ಮಾಡಲು ಪ್ರಧಾನಿ ನರೇಂದ್ರ ಮೋದಿ ಬಳಿ ಹಣವಿಲ್ಲ. ಆದರೆ ಉದ್ಯಮಿಗಳ 3.5 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲು ಅವರ ಬಳಿ ಹಣವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ತಿರುಪತಿಯಲ್ಲಿ ರ್ಯಾಲಿ ನಡೆಸಿದ ರಾಹುಲ್, ನಮ್ಮ ಸರ್ಕಾರ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಡದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ನೀಡಿದ ಭರವಸೆಯನ್ನು ಈಡೇರಿಸಿದೆ ಎಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೆ ರಫೇಲ್ ಡೀಲ್‌ನಲ್ಲಿ ಅವ್ಯವಹಾರ ನಡೆದಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಒಪ್ಪಂದವನ್ನು ಮರುಪರಿಶೀಲಿಸಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.