ಚಿದಂಬರಂ ಭೇಟಿಯಾದ ರಾಹುಲ್, ಪ್ರಿಯಾಂಕಾ
Team Udayavani, Nov 27, 2019, 8:16 PM IST
ಹೊಸದಿಲ್ಲಿ: ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕನನ್ನು ಆಗಸ್ಟ್ 21ರಂದು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿತ್ತು. ಅಕ್ಟೋಬರ್ 22ರಂದು ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಮನಿ ಲಾಂಡರಿಂಗ್ ಪ್ರಕರಣವೊಂದರಲ್ಲಿ ಅವರನ್ನು ಅಕ್ಟೋಬರ್ 16ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿ, ವಿಚಾರಣೆ ನಡೆಸುತ್ತಿದೆ. ನ್ಯಾಯಾಲಯದ ಆದೇಶದ ಮೇರೆಗೆ ನವೆಂಬರ್ 27ರ ವರೆಗೆ ನ್ಯಾಯಾಂಗ ಬಂಧನ ನೀಡಲಾಗಿತ್ತು.
ಬಂಧನ ಅವಧಿ ವಿಸ್ತರಣೆ
ಐಎನ್‌ಎಕ್ಸ್ ಮೀಡಿಯಾ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿ ಇರುವ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 11 ವಿಸ್ತರಿಸಿ ದೆಹಲಿ ವಿಶೇಷ ನ್ಯಾಯಾಲಯ ಬುಧವಾರ ಆದೇಶ ನೀಡಿದೆ.
ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಮಾಡಿದ್ದ ಮನವಿಯನ್ನು ಪುರಸ್ಕರಿಸಿದ ವಿಶೇಷ ನ್ಯಾಯಾಲಯದ ನಾ| ಅಜಯ್ ಕುಮಾರ್ ಕುಹಾರ್ ಅವರು ಈ ಆದೇಶ ನೀಡಿದ್ದಾರೆ. ಬಂಧನ ಅವಧಿಯನ್ನು ವಿಸ್ತರಿಸಲು ಇಡಿ ಮಾಡಿದ್ದ ಮನವಿಗೆ ಚಿದಂಬರಂ ಅವರ ವಕೀಲರು ಯಾವುದೇ ವಿರೋಧ ವ್ಯಕ್ತಪಡಿಸಲಿಲ್ಲ.
ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಆರೋಪಿಯ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಮನವಿ ಮಾಡಿತ್ತು. ಇ.ಡಿ. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬುಧವಾರ ಚಿದಂಬರ ಅವರನ್ನು ಭೇಟಿಯಾಗಿ ಕುಶಲೋಪರಿ ನಡೆಸಿದ್ದರು. ಹಿರಿಯ ಮುಖಂಡರಾದ ಶಶಿ ತರೂರ್ ಮತ್ತು ಮನೀಶ್ ತಿವಾರಿ ಅವರು ಸೋಮವಾರ ಚಿದಂಬರಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
MUST WATCH
ಹೊಸ ಸೇರ್ಪಡೆ
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.