ಮೋದಿಯನ್ನು ರಾವಣನಂತೆ ಬಿಂಬಿಸಿದ್ದಕ್ಕೆ ರಾಹುಲ್ ಕ್ಷಮೆಗೆ ಪಟ್ಟು
Team Udayavani, Jan 16, 2018, 6:45 AM IST
ಲಕ್ನೋ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರದಿಂದ 2 ದಿನಗಳ ಉತ್ತರ ಪ್ರದೇಶ ಪ್ರವಾಸ ಕೈಗೊಂಡಿದ್ದು, ಮೊದಲ ದಿನವೇ ಅವರನ್ನು ವಿವಾದವೊಂದು ಸುತ್ತಿಕೊಂಡಿದೆ. ರಾಹುಲ್ ಆಗಮನದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ರಾಹುಲ್‌ಗಾಂಧಿ ಅವ ರನ್ನು ಶ್ರೀರಾಮನಂತೆಯೂ, ಪ್ರಧಾನಿ ಮೋದಿ ಅವರನ್ನು ರಾವಣನಂತೆಯೂ ಬಿಂಬಿಸಿದ ಫೋಟೋವುಳ್ಳ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಅಲ್ಲದೆ, ಅದರಲ್ಲಿ “ದೇಶದಲ್ಲಿ ರಾಮರಾಜ್ಯ ಸ್ಥಾಪಿಸಲು ರಾಹುಲ್‌ಗಾಂಧಿಗಷ್ಟೇ ಸಾಧ್ಯ’ ಎಂದೂ ಬರೆಯಲಾಗಿತ್ತು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕೂಡಲೇ ರಾಹುಲ್ ಗಾಂಧಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದೆ.
ಬಿಜೆಪಿ ನಾಯಕ ಶ್ರೀಕಾಂತ್ ಶರ್ಮಾ ಮಾತನಾಡಿ, ಪ್ರಧಾನಿ ಮೋದಿ ಅವಹೇಳನ ಮಾಡುವಂಥ ಪೋಸ್ಟರ್ ಹಾಕಿದ್ದಕ್ಕೆ ರಾಹುಲ್ ಅವರು ಇಡೀ ದೇಶದ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ, ರಾಹುಲ್ ತಮ್ಮ ಕ್ಷೇತ್ರವಾದ ಅಮೇಠಿಗೆ ಹೋದಾಗ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದು, ಕೆಲ ಕಾಲ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಪೊಲೀಸರು ಬಂದು ಎಲ್ಲರನ್ನೂ ಚದುರಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.
ಇದಕ್ಕೂ ಮುನ್ನ, ಉತ್ತರಪ್ರದೇಶಕ್ಕೆ ಬಂದಿಳಿಯುತ್ತಿದ್ದಂತೆ ರಾಹುಲ್ ಹನುಮಾನ್ ದೇಗುಲಕ್ಕೆ ಹೋಗಿ ಪೂಜೆ ಸಲ್ಲಿಸಿದರು. ನಂತರ, ಅಮೇಠಿಯಲ್ಲಿ ಮಾತನಾಡಿದ ಅವರು, ಏನೇ ಬಂದರೂ ಅಮೇಠಿಯಲ್ಲಿ ಫುಡ್ ಪಾರ್ಕ್ ನಿರ್ಮಿಸಿಯೇ ಸಿದ್ಧ ಎಂದರು. ಜತೆಗೆ, ಪ್ರಧಾನಿ ಮೋದಿ ಚುನಾವಣೆ ವೇಳೆ ನೀಡಿದ ಯಾವ ಆಶ್ವಾಸನೆಯನ್ನೂ ಈಡೇರಿಸಿಲ್ಲ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.