ಕರ್ನಾಟಕ ಚುನಾವಣೆ ಸಿಂಪಥಿಗೆ ಈ ನಾಟಕ: ರಾಹುಲ್ ವಿರುದ್ಧ ರವಿಶಂಕರ್ ಪ್ರಸಾದ್ ಆರೋಪ
Team Udayavani, Mar 26, 2023, 7:10 AM IST
ಪಟ್ನಾ: ಕರ್ನಾಟಕ ವಿಧಾನಸಭೆಗೆ ಶೀಘ್ರವೇ ನಡೆಯಲಿರುವ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದಲೇ ಸೂರತ್ ಕೋರ್ಟ್ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿಲ್ಲ. ಹೀಗೆಂದು ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ.
ಪಟ್ನಾದಲ್ಲಿ ಶುಕ್ರವಾರ ಮಾತನಾಡಿದ ಅವರು ರಾಹುಲ್ ಆರೋಪ ಗಳೆಲ್ಲ ಸುಳ್ಳು ಮತ್ತು ಆಧಾರ ರಹಿತವಾದದ್ದು ಎಂದರು. 2019ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಅನರ್ಹಗೊಳಿಸಲಾಗಿ ದೆಯೇ ವಿನಾ ಇದಕ್ಕೂ ಅದಾನಿ- ಹಿಂಡನ್‌ಬರ್ಗ್ ವಿಚಾರಕ್ಕೂ ಸಂಬಂಧವೇ ಇಲ್ಲ. ವಿಷಯಾಂತರ ಮಾಡುವುದು ರಾಹುಲ್ ಅವರಿಗೆ ಅಭ್ಯಾಸವಾಗಿಬಿಟ್ಟಿದೆ ಎಂದರು. ರಾಹುಲ್ ತಳಸಮುದಾಯವನ್ನು ಅವಮಾನಿಸಿದ್ದಾರೆ. ಅದನ್ನು ಮಾಡಲು ಅವರಿಗೆ ಹಕ್ಕಿದೆಯೆಂದಾದರೆ, ಅದನ್ನು ಪ್ರಶ್ನಿಸಿ ಕೋರ್ಟ್‌ಗೆ ಹೋಗಲು ಆ ಸಮುದಾಯದವರಿಗೂ ಹಕ್ಕಿದೆ. ಕ್ಷಮೆ ಕೇಳುತ್ತೀರಾ ಎಂದು ಕೋರ್ಟ್ ಕೇಳಿದಾಗ ರಾಹುಲ್ ಒಪ್ಪಲಿಲ್ಲ. ಹೀಗಾಗಿ ಶಿಕ್ಷೆಯಾಯಿತು ಎಂದ ರವಿಶಂಕರ್, ಒಬಿಸಿ ಸಮುದಾಯಕ್ಕೆ ಅವಮಾನ ಮಾಡಿದ ರಾಹುಲ್ ವಿರುದ್ಧ ಬಿಜೆಪಿಯು ದೊಡ್ಡಮಟ್ಟದ ಪ್ರತಿಭಟನೆ ನಡೆಸಲಿದೆ ಎಂದೂ ಘೋಷಿಸಿದ್ದಾರೆ. ಜತೆಗೆ ರಾಹುಲ್ ಗಾಂಧಿ ಭಾರತದಲ್ಲಿ ಪ್ರಜಾಪ್ರಭುತ್ವ ಕಾಪಾಡಲು ವಿದೇಶಿ ನೆರವು ಕೋರಿ ಮಾತನಾಡಿದ್ದ ವೀಡಿಯೋವನ್ನು ಕೂಡ ಪ್ರದರ್ಶಿಸಿದರು.
ಮೇಲ್ಮನವಿ ಸಲ್ಲಿಸಿಲ್ಲ ಏಕೆ?: ಕಾಂಗ್ರೆಸ್ ವಕ್ತಾರ ಪವನ್ ಖೇರಾ ಪ್ರಕರಣದಲ್ಲಿ ಕೇವಲ ಒಂದೇ ಗಂಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಹೋಗಿ ತಡೆಯಾಜ್ಞೆ ತಂದ ಕಾಂಗ್ರೆಸ್‌ನ ವಕೀಲರ ಪಡೆ, ಈಗ ಏಕೆ ಸುಮ್ಮನಿದೆ? ರಾಹುಲ್ ಪ್ರಕರಣದಲ್ಲಿ ಇನ್ನೂ ಏಕೆ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿಲ್ಲ? ಉದ್ದೇಶಪೂರ್ವಕವಾಗಿಯೇ ಕಾಂಗ್ರೆಸ್
ಕೋರ್ಟ್‌ಗೆ ಹೋಗುತ್ತಿಲ್ಲ. ಏಕೆಂದರೆ ಇದನ್ನೇ ದಾಳವಾಗಿಟ್ಟುಕೊಂಡು “ಬಲಿಪಶು’ವೆಂದು ತೋರಿಸಿಕೊಳ್ಳುತ್ತಾ ಮುಂಬರುವ ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ರಾಜಕೀಯ ಲಾಭ ಗಳಿಸಲು ಪ್ರಯತ್ನಿಸುತ್ತಿದೆ ಎಂದೂ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ.
ಶೀಘ್ರದಲ್ಲೇ ಚುನಾವಣೆ?: ರಾಹುಲ್ ಅನರ್ಹಗೊಂಡಿರುವ ಕಾರಣ, ಅವರು ಪ್ರತಿನಿಧಿಸುವ ವಯನಾಡ್ ಕ್ಷೇತ್ರಕ್ಕೆ ಸದ್ಯದಲ್ಲೇ ಚುನಾವಣ ಆಯೋಗ ಹೊಸ ಚುನಾವಣ ದಿನಾಂಕ ಘೋಷಿಸುವ ಸಾಧ್ಯತೆಯಿದೆ.
ಕಾಂಗ್ರೆಸ್, ಬಿಜೆಪಿ ಪ್ರತಿಭಟನೆ
ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಮಹಾರಾಷ್ಟ್ರ, ಛತ್ತೀಸ್‌ಗಢ, ತೆಲಂಗಾಣ ಸಹಿತ ದೇಶದ ಹಲವು ಕಡೆ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿ ದ್ದಾರೆ. ವಯನಾಡ್‌ನಲ್ಲಿ ಪ್ರಧಾನಿ ಮೋದಿ ಯವರ ಪ್ರತಿಕೃತಿಯನ್ನೂ ದಹನ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಮತ್ತೂಂದೆಡೆ ರಾಹುಲ್ ಒಬಿಸಿ ಸಮುದಾಯಕ್ಕೆ ಅವಮಾನ ಮಾಡಿದೆ ಎಂದು ಆರೋಪಿಸಿ ಮುಂಬಯಿ ಯಲ್ಲಿ ಬಿಜೆಪಿ ಕೂಡ ಪ್ರತಿಭಟನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.