ರಾಹುಲ್ ಮತ್ತು ಸೋನಿಯಾಗೆ ಮೊದಲು ಕೊರೊನಾ ಪರೀಕ್ಷೆ ಮಾಡಿಸಿ!
Team Udayavani, Mar 5, 2020, 7:38 PM IST
ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಇತ್ತೀಚೆಗಷ್ಟೇ ತಮ್ಮ ಇಟಲಿ ಪ್ರವಾಸವನ್ನು ಮುಗಿಸಿ ವಾಪಾಸಾಗಿರುವುದರಿಂದ ಇವರಿಬ್ಬರಿಗೆ ಶಂಕಿತ ಕೊರೋನಾ ಪರೀಕ್ಷೆ ಮಾಡಿಸಬೇಕು ಎಂದು ಬಿಜೆಪಿ ಸಂಸದರು ಲೋಕಸಭೆಯಲ್ಲಿ ಇಂದು ಆಗ್ರಹಿಸಿದ ಘಟನೆ ನಡೆಯಿತು.
ಪಕ್ಷೇತರ ಸಂಸದ ಹನುಮಾನ್ ಬೇನಿವಾಲ ಅವರು ಮೊದಲು ಲೋಕಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದರು. ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕುರಿತಾಗಿ ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪಿಸಲ್ಪಟ್ಟಿತು.
ಕೊರೊನಾ ವಿಚಾರವಾಗಿ ಪಕ್ಷಬೇಧ ಮರೆತು ಸಂಸದರೆಲ್ಲರೂ ಗಂಭೀರ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ನಡುವೆ ವಿಷಯಾಂತರ ಮಾಡಿದ ಪಕ್ಷೇತರ ಸಂಸದ ಬೇನಿವಾಲಾ ಅವರು ರಾಹುಲ್ ಮತ್ತು ಸೋನಿಯಾ ಗಾಂಧಿ ಅವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು, ಯಾಕೆಂದರೆ ಅವರು ಇತ್ತೀಚೆಗಷ್ಟೇ ಇಟಲಿ ಪ್ರವಾಸವನ್ನು ಮುಗಿಸಿ ಬಂದಿದ್ದಾರೆ ಎಂದು ಹೇಳಿದರು.
ಇದಾದ ಬಳಿಕ ಸದನ ಕೋಲಾಹಲದ ಗೂಡಾಯಿತು. ಪ್ರತಿಪಕ್ಷ ಕಾಂಗ್ರೆಸ್ ಸಂಸದರು ಹನುಮಾನ್ ಬೇನಿವಾಲಾ ಅವರ ಕ್ಷಮೆ ಅಥವಾ ಅಮಾನತಿಗೆ ಆಗ್ರಹಿಸಿದರು. ತಕ್ಷಣವೇ ಲೋಕಸಭಾಧ್ಯಕ್ಷರು ಈ ವಿಚಾರವನ್ನು ಕಡತದಿಂದ ತೆಗೆದು ಹಾಕಲು ಸೂಚಿಸಿದರು ಮತ್ತು ಈ ವಿಚಾರವನವನ್ನು ಇಲ್ಲಿಗೇ ಮುಗಿಸಲು ಪ್ರಯತ್ನಿಸಿದರು. ಆದರೆ ಕಾಂಗ್ರೆಸ್ ಸದಸ್ಯರು ಮಾತ್ರ ಬೇನಿವಾಲಾ ಅವರ ಕ್ಷಮೆಗೆ ಪಟ್ಟುಹಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.