Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
Team Udayavani, Apr 23, 2024, 11:20 PM IST
ತಿರುವನಂತಪುರ: “ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೆಳ ದರ್ಜೆಯ ನಾಗರಿಕ. ರಾಹುಲ್ ಅವರು ನೆಹರು ಕುಟುಂಬದವರೋ, ಅಲ್ಲವೋ ಎಂಬುದನ್ನು ತಿಳಿಯಲು ಡಿಎನ್ಎ ಪರೀಕ್ಷೆಗೆ ಒಳಪಡಿಸಬೇಕು’ ಎಂದು ಕೇರಳದ ಪಕ್ಷೇತರ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನೀಲಾಂಬುರ್ ಕ್ಷೇತ್ರದ ಪಕ್ಷೇತರ ಶಾಸಕ ಪಿ.ವಿ.ಅನ್ವರ್, ವಿವಾದಾತ್ಮಕ ಹೇಳಿಕೆ ನೀಡಿರುವ ವ್ಯಕ್ತಿ.
ಪಾಲಕ್ಕಾಡ್ನಲ್ಲಿ ಮಂಗಳವಾರ ನಡೆದ ಚುನಾವಣ ರ್ಯಾಲಿಯಲ್ಲಿ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕುರಿತು ಇತ್ತೀಚೆಗೆ ಆರೋಪ ಮಾಡಿದ್ದ ರಾಹುಲ್ ಬಗ್ಗೆ ಕಿಡಿಕಾರುತ್ತಾ, “ನೆಹರೂ ಕುಟುಂಬದಲ್ಲಿ ಜನಿಸಿದ ಯಾರಾದರೂ ಈ ರೀತಿ ಮಾತನಾಡಲು ಸಾಧ್ಯವೇ? ರಾಹುಲ್ ಬಗ್ಗೆ ನನಗೆ ತೀರಾ ಅನುಮಾನವಿದ್ದು, ಅವರ ಡಿಎನ್ಎ ಪರೀಕ್ಷೆ ಮಾಡಬೇಕಾದ ಅಗತ್ಯವಿದೆ ಎನಿಸುತ್ತಿದೆ’ ಎಂದಿದ್ದರು.
ಅನ್ವರ್ ಅವರ ಕೀಳು ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಸಿಡಿದೆದ್ದಿದ್ದು, ಚುನಾವಣ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ. ಅಲ್ಲದೆ ತತ್ಕ್ಷಣ ಅನ್ವರ್ ವಿರುದ್ಧ ಕೇಸು ದಾಖಲಿಸುವಂತೆ ಆಗ್ರಹಿಸಿ ದ್ದಾರೆ. ಅನ್ವರ್ ಈ ರೀತಿ ಮಾತನಾಡಲು ಪಿಣರಾಯ್ವಿಜಯನ್ ಅವರೇ ಕಾರಣ ಎಂದು ದೂಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.