ಅಮೇಠಿ ನಂಟು ಮುಗಿಯದು
ತಮ್ಮ ಮಾಜಿ ಕ್ಷೇತ್ರದಲ್ಲಿ ರಾಹುಲ್ ಭಾವುಕ ಮಾತು!
Team Udayavani, Jul 11, 2019, 5:00 AM IST
ಅಮೇಠಿ: “ಈ ಕ್ಷೇತ್ರ ನನ್ನ ಮನೆಯಿದ್ದಂತೆ. ಇಲ್ಲಿನ ಜನ ನನ್ನ ಕುಟುಂಬವಿದ್ದಂತೆ. ಇಲ್ಲಿಂದ ನಾನು ದೂರ ಉಳಿಯುವ ಪ್ರಶ್ನೆಯೇ ಇಲ್ಲ. ನಾನೀಗ ವಯನಾಡ್ ಸಂಸದನಾಗಿರಬಹುದು. ಆದರೆ, ಅಮೇಠಿಯೊಂದಿಗಿನ ದಶಕಗಳ ನಂಟು ಕೊನೆಯಾಗಲಾರದು.’ ಲೋಕಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಅಮೇಠಿಗೆ ಭೇಟಿ ನೀಡಿದ ರಾಹುಲ್ ಗಾಂಧಿ ನುಡಿದಿರುವ ಮಾತುಗಳಿವು.
ಚುನಾವಣೆಯಲ್ಲಿ ತಮ್ಮ ಸಾಂಪ್ರದಾಯಿಕ ಕ್ಷೇತ್ರ ಅಮೇಠಿಯಂದ ಸ್ಪರ್ಧಿಸಿದ್ದ ರಾಹುಲ್, ಕೇಂದ್ರ ಸಚಿವೆ ಸ್ಮತಿ ಇರಾನಿ ವಿರುದ್ಧ 52,000 ಮತಗಳ ಅಂತರದಿಂದ ಸೋತಿದ್ದರು.
ಫಲಿತಾಂಶದ ಬಳಿಕ ಮೊದಲ ಬಾರಿಗೆ ಅಮೇಠಿಗೆ ಬುಧವಾರ ಭೇಟಿ ನೀಡಿದ ಅವರು, ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಕ್ಷೇತ್ರದ ಕಾಂಗ್ರೆಸ್ ನಾಯಕರು ಜನರಿಂದ ದೂರ ಉಳಿದಿದ್ದೇ ತಮ್ಮ ಸೋಲಿಗೆ ಕಾರಣವಾಯಿತು. ತಾವು ಇಲ್ಲಿ ಸೋತಿದ್ದರೂ ಅಮೇಠಿಯ ಅಭಿವೃದ್ಧಿಯಲ್ಲಿ ಯಾವುದೇ ಹಿನ್ನಡೆಯಾಗಬಾರದು ಎಂದು ಹೇಳಿದ್ದಾರೆ.
ರಾಹುಲ್‌ಗೆ 1 ಕೋಟಿ ಟ್ವಿಟರ್ ಹಿಂಬಾಲಕರು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ಫಾಲೋವರ್‌ಗಳ ಸಂಖ್ಯೆ ಬುಧವಾರ 1 ಕೋಟಿ ದಾಟಿದೆ. ಈ ಮೈಲುಗಲ್ಲು ತಲುಪಿದ ಹಿನ್ನೆಲೆಯಲ್ಲಿ ತಮ್ಮ ಎಲ್ಲಾ ಫಾಲೋವರ್‌ಗಳಿಗೂ ರಾಹುಲ್ ಧನ್ಯವಾದ ಅರ್ಪಿಸಿದ್ದಾರೆ. “1 ಕೋಟಿ ಫಾಲೋವರ್‌ಗಳು, ನಿಮ್ಮೆಲ್ಲರಿಗೂ ಧನ್ಯವಾದಗಳು. ನಾನು ಈ ಸಂಭ್ರಮವನ್ನು ಅಮೇಠಿಯ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಆಚರಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. ಕಳೆದ ವರ್ಷ ಶಶಿ ತರೂರ್ ಕಾಂಗ್ರೆಸ್‌ನಲ್ಲಿ ಅತಿ ಹೆಚ್ಚು ಟ್ವಿಟರ್ ಫಾಲೋವರ್‌ಗಳನ್ನು ಹೊಂದಿರುವ ನಾಯಕ ಎಂದು ಕರೆಸಿಕೊಂಡಿದ್ದರು. ರಾಹುಲ್ ಗಾಂಧಿ ಈಗ ಅವರನ್ನು ಹಿಂದಿಕ್ಕಿದ್ದಾರೆ. ಪ್ರಧಾನಿ ಮೋದಿ 4.80 ಕೋಟಿ ಫಾಲೋವರ್‌ಗಳನ್ನು ಹೊಂದುವ ಮೂಲಕ, ದೇಶದಲ್ಲಿ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ನಾಯಕ ಎಂಬ ಪಟ್ಟವನ್ನು ಕಾಯ್ದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.