ರಾಹುಲ್ ನನ್ನ ಬಾಸ್; ಎಲ್ಲರೂ ಆತನನ್ನು ಬೆಂಬಲಿಸಬೇಕು: ಸೋನಿಯಾ
Team Udayavani, Feb 8, 2018, 11:44 AM IST
ಹೊಸದಿಲ್ಲಿ : ರಾಹುಲ್ ಗಾಂಧಿ ಈಗ ನನ್ನ ಬಾಸ್; ಆತನ ಶಕ್ತಿ, ಸಾಮರ್ಥ್ಯದ ಬಗ್ಗೆ ನನಗೆ ಶಂಕೆಯೇ ಇಲ್ಲ ಎಂದು ಎರಡು ದಶಕಗಳ ಕಾಲ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿ ಕರ್ತವ್ಯ ನಿರ್ವಹಿಸಿ ತನ್ನ ಪುತ್ರನಿಗೆ ಪಕ್ಷದ ಕಾರ್ಯಭಾರವನ್ನು ಒಪ್ಪಿಸಿ ಹಿಂಬದಿ ಸೀಟಿಗೆ ಸರಿದಿರುವ ಸೋನಿಯಾ ಗಾಂಧಿ ಅವರು ಸಂಭ್ರಮದಿಂದ ಹೇಳಿರುವ ಮಾತಿದು.
“ಕಾಂಗ್ರೆಸ್ ಅಧ್ಯಕ್ಷನಾಗಿ ರಾಹುಲ್ ಗಾಂಧಿಯ ಶಕ್ತಿ, ಸಾಮರ್ಥ್ಯ, ಪ್ರೌಢಿಮೆ ಹಾಗೂ ಕೌಶಲದ ಬಗ್ಗೆ ನನಗೀಗ ಯಾವ ಸಂದೇಹಗಳೂ ಇಲ್ಲ; ಎಲ್ಲರೂ ಆತನನ್ನು ಬೆಂಬಲಿಸುವರೆಂದು ನಾನು ಹಾರೈಸುತ್ತೇನೆ’ ಎಂದು ಸೋನಿಯಾ ಗಾಂಧಿ ನಿನ್ನೆ ಬುಧವಾರ ನಡೆದಿದ್ದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡುತ್ತಾ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಶೈಲಿಯನ್ನು ಟೀಕಿಸುತ್ತಾ, ಸೋನಿಯಾ ಗಾಂಧಿ, “ಆಳುವ ಪಕ್ಷದ ಆಡಳಿತೆಯಲ್ಲಿ ಸಂಸದೀಯ ಶಕ್ತಿಗಳನ್ನು ದುರ್ಬಲಗೊಳಿಸಲಾಗಿದೆ. ಪ್ರಧಾನಿ ಮೋದಿ ಸರಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳು ಸಂದಿವೆ; ಈ ಅವಧಿಯಲ್ಲಿ ಸಂಸದೀಯ ಸಂಸ್ಥೆಗಳು ವ್ಯವಸ್ಥಿತ ದಾಳಿಗೆ ಗುರಿಯಾಗಿವೆ.ಸಂಸತ್ತು ಮಾತ್ರವಲ್ಲದೆ ನ್ಯಾಯಾಂಗ, ಮಾಧ್ಯಮ ಮತ್ತು ಒಟ್ಟಾರೆಯಾಗಿ ಪೌರ ಸಮಾಜ ದಾಳಿ, ಬೆದರಿಕೆಗೆ ಗುರಿಯಾಗಿವೆ. ರಾಜಕೀಯ ವಿರೋಧಿಗಳ ವಿರುದ್ಧ ತನಿಖಾ ಸಂಸ್ಥೆಗಳನ್ನು ಛೂ ಬಿಡಲಾಗಿದೆ. ದಲಿತರ ಮೇಲೆ ದಾಳಿಗಳು ನಿರಂತರವಾಗಿ ನಡೆಯುತ್ತಿವೆ. ಯಾವುದೇ ಹೊಸ ಉದ್ಯೋಗಗಳನ್ನು ಸೃಷ್ಟಿಸಲಾಗಿಲ್ಲ; ಹಾಗಾಗಿ ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
MUST WATCH
ಹೊಸ ಸೇರ್ಪಡೆ
Afro-Asia Cup: 2 ದಶಕಗಳ ಬಳಿಕ ಆಫ್ರೋ -ಏಷ್ಯಾ ಕಪ್?
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.