![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 5, 2024, 9:28 AM IST
ನವದೆಹಲಿ: ಉತ್ತರಪ್ರದೇಶದ ಹಾಥರಸ್ ಜಿಲ್ಲೆಯ ಫುಲ್ ರಾಯ್ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಭೇಟಿ ಮಾಡಲಿದ್ದಾರೆ.
ಉತ್ತರ ಪ್ರದೇಶದ ಹಾಥರಸ್ ನಲ್ಲಿ ನಡೆದ ಸತ್ಸಂಗದಲ್ಲಿ ನಡೆದ ಭಾರೀ ಕಾಲ್ತುಳಿತದಲ್ಲಿ 121 ಜನರು ಸಾವನ್ನಪ್ಪಿದ ಎರಡು ದಿನಗಳ ಬಳಿಕ ಯುಪಿ ಪೊಲೀಸರು ಬೋಧಕ ಭೋಲೆ ಬಾಬಾ ಅವರ ಸಂಘಟನಾ ಸಮಿತಿಯ ಆರು ಸದಸ್ಯರನ್ನು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಎಲ್ಲಾ ಆರು ಜನರು ಸತ್ಸಂಗದಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡಿದರು ಎಂದು ಹೇಳಲಾಗಿದೆ.
ಇದರ ನಡುವೆ ರಾಹುಲ್ ಗಾಂಧಿ ಇಂದು (ಶುಕ್ರವಾರ) ಹಾಥರಸ್ ಗೆ ಭೇಟಿ ನೀಡಲಿದ್ದು, ಅಲ್ಲಿ ಕಾಲ್ತುಳಿತದಿಂದ ಮೃತಪಟ್ಟಿರುವ ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಅಲಿಘಡಕ್ಕೆ ಬರಲಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಕಾಂಗ್ರೆಸ್ ನಾಯಕ ಅಜಯ್ ರಾಯ್ ಹಾಥರಸ್ ಸಂತ್ರಸ್ತರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಇಂದು ಬೆಳಿಗ್ಗೆ 5:10 ರ ಸುಮಾರಿಗೆ ಉತ್ತರ ಪ್ರದೇಶಕ್ಕೆ ಪ್ರಯಾಣ ಬೆಳೆಸಿದ್ದು ಅವರ ಜೊತೆಗೆ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ, ಪಕ್ಷದ ವಕ್ತಾರೆ ಶ್ರೀನೆತ್ ಸೇರಿ ಹಲವು ಪದಾಧಿಕಾರಿಗಳು ಜೊತೆಗಿದ್ದಾರೆ ಎಂದು ಹೇಳಿದ್ದಾರೆ.
ಸತ್ಸಂಗ ಕಾರ್ಯಕ್ರಮದಲ್ಲಿ 80,000 ಮಂದಿಗೆ ಅನುಮತಿ ನೀಡಲಾಗಿತ್ತು ಆದರೆ ಮಿತಿ ಮೀರಿ 2.5 ಲಕ್ಷ ಜನರು ಸ್ಥಳದಲ್ಲಿ ಜಮಾಯಿಸಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು
VIDEO | Congress MP Rahul Gandhi (@RahulGandhi) meets the families of the Hathras stampede victims in Aligarh.
(Full video available on PTI Videos – https://t.co/n147TvqRQz) pic.twitter.com/LQ6wTonyDe
— Press Trust of India (@PTI_News) July 5, 2024
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.