![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 31, 2023, 7:43 PM IST
ಮುಂಬಯಿ: ”ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ (OCCRP) ಮುಂದಿಟ್ಟಿರುವ ಅದಾನಿ ಗ್ರೂಪ್ ವಿರುದ್ಧದ ಹೊಸ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಏನು ನಡೆಯುತ್ತಿದೆ ಎಂಬುದನ್ನು ಸ್ಪಷ್ಟವಾಗಿ ವಿವರಿಸಬೇಕು” ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗುರುವಾರ ಒತ್ತಾಯಿಸಿದ್ದಾರೆ.
ಇಂಡಿಯಾ ಮೈತ್ರಿಕೂಟದ ಮೂರನೇ ಸಭೆಗೆ ಮುನ್ನ ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅದಾನಿ ಗ್ರೂಪ್ ಮೇಲಿನ ಆರೋಪಗಳ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿಯನ್ನು ರಚಿಸಬೇಕು ಮತ್ತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
“ಪ್ರಧಾನಿ ಏಕೆ ತನಿಖೆಗೆ ಒತ್ತಾಯಿಸುತ್ತಿಲ್ಲ ಎಂದು ನನಗೆ ಅರ್ಥವಾಗುತ್ತಿಲ್ಲ, ಅವರು ಏಕೆ ಸುಮ್ಮನಿದ್ದಾರೆ? ಈ ವಿಷಯದ ಬಗ್ಗೆ ತನಿಖೆ ನಡೆಸಿ ಹೊಣೆಗಾರರನ್ನು ಕಂಬಿ ಹಿಂದೆ ಹಾಕುವುದನ್ನು ಖಚಿತಪಡಿಸಿಕೊಳ್ಳುವುದಾಗಿ ಅವರು ಏಕೆ ಹೇಳುತ್ತಿಲ್ಲ? ಜಿ20 ನಾಯಕರು ಇಲ್ಲಿಗೆ ಬರುವ ಮುನ್ನವೇ ಇದು ಭಾರತದ ಪ್ರಧಾನಿಯ ಮೇಲೆ ಗಂಭೀರವಾದ ಪ್ರಶ್ನೆಯನ್ನು ಎತ್ತುವಂತೆ ಮಾಡಿದೆ” ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.
OCCRP ವರದಿಯು ”ಅಪಾರದರ್ಶಕ ಮಾರಿಷಸ್ ನಿಧಿಗಳನ್ನು ಅದಾನಿ ಗ್ರೂಪ್‌ನ ಸಾರ್ವಜನಿಕವಾಗಿ ವ್ಯಾಪಾರ ಮಾಡುವ ಸ್ಟಾಕ್‌ಗಳಿಗೆ ಗಣನೀಯ ಹೂಡಿಕೆಗಳನ್ನು ಮಾಡಲು ಬಳಸಲಾಗಿದೆ” ಎಂದು ಆರೋಪಿಸಿ, ”ಅದಾನಿ ಕುಟುಂಬದೊಂದಿಗೆ ಸಂಬಂಧಿಸಿದ ವ್ಯಾಪಾರ ಪಾಲುದಾರರ ಒಳಗೊಳ್ಳುವಿಕೆಯನ್ನು ಮರೆಮಾಚಲಾಗಿದೆ” ಎಂದು ಹೇಳಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.