‘ಕೈ’ಗೆ ಅಧಿಕಾರ ಕೊಟ್ಟರೆ ವರ್ಷಕ್ಕೆ 72 ಸಾವಿರ ನಿಮ್ಮ ಅಕೌಂಟಿಗೆ ಜಮೆ!
ದೇಶದ 20% ಕಡುಬಡ ವರ್ಗಕ್ಕೆ ಬಂಪರ್ ಆಫರ್ ಘೋಷಿಸಿದ ರಾಗಾ
Team Udayavani, Mar 25, 2019, 3:05 PM IST
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಿದರೆ ದೇಶದ ಕಡು ಬಡ ಕುಟುಂಬಗಳಿಗೆ ವಾರ್ಷಿಕ 72ಸಾವಿರ ರೂಪಾಯಿಗಳನ್ನು ಅವರ ಅಕೌಂಟಿಗೆ ಜಮಾ ಮಾಡುವ ವಿನೂತನ ಆಶ್ವಾಸನೆಯೊಂದನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾಡಿದ್ದಾರೆ. ಆ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಗಾ ಅವರು ದೇಶದ ಬಡವರ್ಗದ ಮತದಾರರನ್ನು ಓಲೈಸುವ ಕಾರ್ಯತಂತ್ರಕ್ಕೆ ಕೈ ಹಾಕಿದ್ದಾರೆ.
ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ರಾಹುಲ್ ಗಾಂಧಿ ಅವರು ಈ ವಿಚಾರವನ್ನು ಬಹಿರಂಗಪಡಿಸಿದರು. ‘ಈ ದೇಶದ ಬಡವರ ಕುರಿತಾಗಿ ನಮ್ಮ ಪಕ್ಷಕ್ಕೆ ಅತೀವ ಕಾಳಜಿ ಇದ್ದು ಅವರ ಸಮಸ್ಯೆಗಳನ್ನು ನಿವಾರಿಸಲು ನಾವು ಬಹುವಿಧ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ’ ಎಂದು ಅವರು ಹೇಳಿದರು. ಮತ್ತೆ ಮುಂದುವರೆದು ‘ಕನಿಷ್ಠ ತಲಾ ಆದಾಯ ಯೋಜನೆಯಡಿಯಲ್ಲಿ ವರ್ಷಕ್ಕೆ 72,000 ರೂಪಾಯಿಗಳನ್ನು ಈ ದೇಶದಲ್ಲಿರುವ 20% ಕಡು ಬಡ ಕುಟುಂಬಗಳ ಬ್ಯಾಂಕ್ ಅಕೌಂಟ್ ಗಳಿಗೆ ಜಮಾ ಮಾಡಲಾಗುವುದು’ ಎಂಬ ಆಶ್ವಾಸನೆಯನ್ನು ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಪರವಾಗಿ ನೀಡಿದರು. ಈ ಯೋಜನೆ ಜಾರಿಗೆ ಸಂಬಂಧಿಸಿದಂತೆ ಎಲ್ಲಾ ಲೆಕ್ಕಾಚಾರಗಳನ್ನೂ ನಾವು ಮಾಡಿದ್ದೇವೆ. ಪ್ರಪಂಚದ ಯಾವುದೇ ದೇಶದಲ್ಲಿ ಈ ರೀತಿಯ ಯೋಜನೆ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಟೀಕಾಪ್ರಹಾರವನ್ನು ಮುಂದುವರೆಸಿದ ರಾಹುಲ್ ಗಾಂಧಿ ಅವರು, ‘ಮೋದಿ ಈ ದೇಶದ ಶ್ರೀಮಂತರಿಗೆ ಹಣ ನೀಡಬಹುದಾದರೆ, ನಾವೂ ಸಹ ಈ ದೇಶದ ಬಡವರಿಗೆ ಹಣ ನೀಡಬಹುದು. ಈ ನಮ್ಮ ಹೊಸ ಯೋಜನೆಯಿಂದ 5 ಕೋಟಿ ಕುಟುಂಬಗಳಲ್ಲಿರುವ 25 ಕೋಟಿ ಜನರಿಗೆ ಸಹಾಯವಾಗಲಿದೆ. ಮತ್ತು ತಿಂಗಳಿಗೆ 12,000 ಕ್ಕಿಂತ ಕಡಿಮೆ ಆದಾಯವಿರುವ ಕುಟುಂಬಗಳಿಗಾಗಿ ಈ ಯೋಜನೆಯನ್ನು ರೂಪಿಸಲಾಗಿದೆ’ ಎಂದು ರಾಹುಲ್ ಗಾಂಧಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.