ವ್ಯಾಕ್ಸಿನ್ ಸ್ಟ್ರ್ಯಾಟಜಿ ನೋಟು ಅಮಾನ್ಯೀಕರಣಕಿಂತ ಏನೂ ಕಡಿಮೆ ಇಲ್ಲ : ರಾಹುಲ್ ಕಿಡಿ
Team Udayavani, Apr 21, 2021, 1:20 PM IST
ನವ ದೆಹಲಿ : ಕೋವಿಡ್ ಸೋಂಕು ದೇಶದಲ್ಲಿ ಮತ್ತೆ ಆತಂಕವನ್ನು ಸೃಷ್ಟಿ ಮಾಡಿದೆ. ದಿನ ನಿತ್ಯ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವ್ಯಾಕ್ಸಿನ್ ಸ್ಟ್ರ್ಯಾಟಜಿ ನೋಟು ಅಮಾನ್ಯೀಕರಣಕಿಂತ ಏನೂ ಕಡಿಮೆ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸಾಮಾನ್ಯ ಜನಸಮೂಹವು ಸರದಿಯಲ್ಲಿ ನಿಲ್ಲುತ್ತಿದೆ, ಹಣ, ಆರೋಗ್ಯ ಮತ್ತು ಜೀವನದ ನಷ್ಟವನ್ನು ಅನುಭವಿಸುತ್ತಿದೆ. ಮತ್ತು ಕೊನೆಯಲ್ಲಿ, ಕೆಲವೇ ಕೈಗಾರಿಕೋದ್ಯಮಿಗಳು ಮಾತ್ರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಗಾಂಧಿ ಕಿಡಿ ಕಾರಿದ್ದಾರೆ.
केंद्र सरकार की वैक्सीन रणनीति नोटबंदी से कम नहीं-
* आम जन लाइनों में लगेंगे
* धन, स्वास्थ्य व जान का नुक़सान झेलेंगे
* और अंत में सिर्फ़ कुछ उद्योगपतियों का फ़ायदा होगा।— Rahul Gandhi (@RahulGandhi) April 21, 2021
ಇನ್ನು, ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಕೂಡ ಬಿಜೆಪಿಯನ್ನುತರಾಟೆಗೆ ತೆಗೆದುಕೊಂಡಿದ್ದಾರೆ.
ಓದಿ : ಕೋವಿಡ್ ನನ್ನು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ : ಪ್ರಿಯಾಂಕ ಚೋಪ್ರಾ
ದೇಶದಲ್ಲಿ ಕೋವಿಡ್ ಸಂಕಷ್ಟವಿರುವಾಗ, ವೈದ್ಯಕೀಯ ಆಮ್ಲಜನಕ, ಮತ್ತು ಆಸ್ಪತ್ರೆಯ ಹಾಸಿಗೆಗಳ ಕೊರತೆಗಾಗಿ ಜನರು ಕಷ್ಟ ಪಡುತ್ತಿರುವಾಗ, ಚುನಾವಣಾ ಪ್ರಚಾರದಲ್ಲಿ ಕೇಂದ್ರ ನಾಯಕರು ನಗುತ್ತಿದ್ದರು ಎಂದು ಪ್ರಿಯಾಂಕಾ ಹೇಳಿದ್ದಾರೆ.
ಇನ್ನು, ದೇಶದಲ್ಲಿ ನೀಡಲಾಗುತ್ತಿರುವ ಕೋವಿಡ್ ಲಸಿಕೆ ಪ್ರಮಾಣವು ಬುಧವಾರ 13,01,19,310 ದಾಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಪ್ರಸ್ತುತ ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಪರಿಣಾಮದಿಂದಾಗಿ ಭಾರತವು ಕಳೆದ 24 ಗಂಟೆಗಳಲ್ಲಿ ಸುಮಾರು 3 ಲಕ್ಷ ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, 2,95,041 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 2,023 ಸಾವುಗಳು ವರದಿಯಾಗಿವೆ, ಒಟ್ಟು ಪ್ರಕರಣಗಳನ್ನು 1,56,16,130 ಕ್ಕೆ ಏರಿಕೆಯಾಗಿದೆ. ಇದರಲ್ಲಿ 21,57,538 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ತಿಳಿಸಿದೆ.
ಓದಿ : ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಮರಳಿದ ಸಾರಿಗೆ ನೌಕರರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.