ವಲಸೆ ಕಾರ್ಮಿಕರ ಖಾತೆಗಳಿಗೆ ಹಣವನ್ನು ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ : ರಾಹುಲ್
Team Udayavani, Apr 20, 2021, 12:27 PM IST
ನವ ದೆಹಲಿ : ವಲಸೆ ಕಾರ್ಮಿಕರ ಖಾತೆಗಳಿಗೆ ಹಣವನ್ನು ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ(ಏ. 20) ಹೇಳಿದ್ದಾರೆ.
ತಮ್ಮ ಟ್ವೀಟರ್ ಖಾತೆಯಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ವಲಸಿಗರು ಮತ್ತೊಮ್ಮೆ ವಲಸೆ ಹೋಗುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ”. ಆದರೆ ಸರ್ಕಾರವು ಕೋವಿಡ್ ಹರಡಲು ಜನರನ್ನು ದೂಷಿಸುತ್ತಿರುವ ಕೇಂದ್ರ, ಇಂತಹ ಸಾರ್ವಜನಿಕ ನೆರವು ಕ್ರಮವನ್ನು ತೆಗೆದುಕೊಳ್ಳುತ್ತದೆಯೇ?” ಎಂದು ಅವರು ಕೇಳಿದ್ದಾರೆ.
प्रवासी एक बार फिर पलायन कर रहे हैं। ऐसे में केंद्र सरकार की ज़िम्मेदारी है कि उनके बैंक खातों में रुपय डाले।
लेकिन कोरोना फैलाने के लिए जनता को दोष देने वाली सरकार क्या ऐसा जन सहायक क़दम उठाएगी?#Lockdown
— Rahul Gandhi (@RahulGandhi) April 20, 2021
ಏರುತ್ತಿರುವ ಕೋವಿಡ್ -19 ಪರಿಸ್ಥಿತಿಯ ಮಧ್ಯೆ ದೆಹಲಿ ಸೋಮವಾರ ರಾತ್ರಿಯಿಂದ ಆರು ದಿನಗಳ ಲಾಕ್ ಡೌನ್ ಘೋಷಿಸುತ್ತಿದ್ದಂತೆ, ನೂರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಸ್ ಗಳಿಗಾಗಿ ಆನಂದ್ ವಿಹಾರ್ ಬಸ್ ಟರ್ಮಿನಲ್ ಗೆ ಧಾವಿಸಿರುವುದನ್ನು ಅನೇಕ ಸುದ್ದಿ ವಾಹಿಗಳು ವರದಿ ಮಾಡಿದ್ದವು.
ಓದಿ : ಬೀದರ್ : ದಕ್ಷಿಣ ಭಾರತದ ಮೊದಲ ಬಿಎಸ್ಪಿ ಶಾಸಕ ಜುಲ್ಫೇಕರ್ ಹಾಶ್ಮಿ ನಿಧನ
ಏತನ್ಮಧ್ಯೆ, ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಭಯಾನಕ ಕೋವಿಡ್ 19 ಪರಿಸ್ಥಿತಿಯನ್ನು ಗಮನಿಸಿದರೆ, ಸರ್ಕಾರವು ಲಾಕ್ ಡೌನ್ ಹೇರುವಂತಹ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿರುವುದು ಸ್ಪಷ್ಟವಾಗಿದೆ, ಆದರೆ, ವಲಸೆ ಕಾರ್ಮಿಕರು ಮತ್ತೊಮ್ಮೆ ಕಳೆದ ಬಾರಿಯ ಸಮಸ್ಯೆಯನ್ನೇ ಎದುರಿಸಬೇಕಾಗುತ್ತದೆ.
ಇದು ನಿಮ್ಮ ಯೋಜನೆಯೇ ? ನೀತಿಗಳು ಎಲ್ಲರನ್ನೂ ನೋಡಿಕೊಳ್ಳುವಂತಹದ್ದಾಗಿರಬೇಕು. ಬಡವರು, ಕಾರ್ಮಿಕರು ಮತ್ತು ಬೀದಿ ವ್ಯಾಪಾರಿಗಳಿಗೆ ಹಣಕಾಸಿನ ನೆರವು ಅವಶ್ಯಕತೆಯಾಗಿದೆ. ದಯವಿಟ್ಟು ಇದನ್ನು ಮಾಡಿ ”ಎಂದು ಅವರು ಹಿಂದಿಯಲ್ಲಿ ಮಾಡಿದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಇನ್ನು, ದೆಹಲಿ, ಯುಪಿ ಮತ್ತು ಇತರ ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಣೆಯಾದ ನಂತರ ಸಾಮಾಜಿಕ ಅಂತರಗಳಿಲ್ಲದೆ ವಲಸಿಗರು ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ತಮ್ಮ ಊರಿಗೆ ಮರಳಲು ಕಾದು ನಿಂತಿದ್ದ ಧೃಶ್ಯಗಳು ಕಂಡು ಬಂದವು.
ಕೋವಿಡ್ ಸೋಂಕನ್ನು ನಿಯಂತ್ರಿಸಲು ದೆಹಲಿ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳಲ್ಲಿ ಲಾಕ್ ಡೌನ್ ಮತ್ತು ಕಂಟೈನ್ ಮೆಂಟ್ ವಲಯಗಳಂತಹ ಉಪಕ್ರಮಗಳ ನಿರ್ಬಂಧಗಳನ್ನು ಜಾರಿಗೆ ತಂದಿವೆ.
ಕಳೆದ ವರ್ಷವೂ ಕೂಡ ಲಾಕ್ ಡೌನ್ ನ ಕಾರಣದಿಂದಾಗಿ ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶಗಳಂತಹ ರಾಜ್ಯಗಳಿಂದ ಸಾವಿರಾರು ಮಂದಿ ವಲಸೆ ಕಾರ್ಮಿಕರು ತಮ್ಮ ಊರಿಗೆ ಕಾಲ್ನಡಿಗೆಯಲ್ಲಿ, ಸೈಕಲ್ಲುಗಳಲ್ಲಿ ಸಾವಿರಾರು ಮೈಲಿ ಗುಳೆ ಹೋಗಿದ್ದಕ್ಕೆ ಇಡಿ ದೇಶ ಸಾಕ್ಷಿಯಾಗಿತ್ತು. ಈಗ ಕೆಲವು ರಾಜ್ಯಗಳಲ್ಲಿ ಸೊಂಕಿನ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಅಲ್ಲಿನ ಸರ್ಕಾರ ಲಾಕ್ ಡೌನ್ ಮೊರೆ ಹೋಗಿದ್ದು, ಅಲ್ಲಲ್ಲಿ ವಲಸೆ ಕಾರ್ಮಿಕರು ಗುಳೆ ಹೋಗುತ್ತಿರುವ ದೃಶ್ಯಗಳು ಕಂಡುಬರುತ್ತಿವೆ.
ಓದಿ : ಕೋವಿಡ್ ಹೆಚ್ಚಳ: ಭಾರತ ಪ್ರವಾಸ ಮುಂದೂಡಿ: ಪ್ರಜೆಗಳಿಗೆ ಅಮೆರಿಕ ಎಚ್ಚರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.