ದೇವರ ನಾಡಿನಿಂದ ಲೋಕಸಭೆಗೆ ‘ರಾಗಾ’ ಸ್ಪರ್ಧೆ ಖಚಿತ
ಕೇರಳದ ವಯನಾಡಿನಿಂದ ಸ್ಪರ್ಧಿಸಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
Team Udayavani, Mar 31, 2019, 12:17 PM IST
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಯುವ ನಾಯಕ ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸುವುದು ಖಚಿತವಾಗಿದೆ. ಈ ವಿಷಯವನ್ನು ಕಾಂಗ್ರೆಸ್ ಪಕ್ಷದ ಮೂಲಗಳು ಭಾನುವಾರ ಖಚಿತಪಡಿಸಿವೆ. ರಾಹುಲ್ ಗಾಂಧಿ ಅವರು ಪ್ರಸ್ತುತ ಉತ್ತರ ಪ್ರದೇಶದ ಅಮೇಥಿ ಲೋಕ ಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಈ ಬಾರಿಯೂ ಸಹ ರಾಹುಲ್ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ. ಮತ್ತು ದಕ್ಷಿಣ ಭಾರತದ ಕೇರಳ ರಾಜ್ಯದಿಂದಲೂ ಸಹ ರಾಗಾ ಅವರು ತಮ್ಮ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ.
ದಕ್ಷಿಣ ಭಾರತದ ಎಲ್ಲಾ ರಾಜ್ಯಗಳೂ ತಮ್ಮ ತಮ್ಮ ರಾಜ್ಯಗಳಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿಕೊಂಡಿದ್ದವು. ಈ ವಿಚಾರವಾಗಿ ಬಹಳಷ್ಟು ಯೋಚಿಸಿ ಚರ್ಚಿಸಿದ ಬಳಿಕ ನಮ್ಮ ಪಕ್ಷದ ಅಧ್ಯಕ್ಷರು ಕೇರಳದ ವಯನಾಡ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲು ಸಮ್ಮತಿಸಿದ್ದಾರೆ. ಈ ವಯನಾಡ್ ಕ್ಷೇತ್ರವು ತನ್ನ ಗಡಿಭಾಗವನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತಿದೆ. ಹಾಗಾಗಿ ಈ ಎರಡು ರಾಜ್ಯಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ರಾಗಾ ಸ್ಪರ್ಧೆ ಬಲತುಂಬಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಎ.ಕೆ. ಆಂಟನಿ ಅವರು ನವದೆಹಲಿಯಲ್ಲಿ ತಿಳಿಸಿದ್ದಾರೆ.
AK Antony,Congress: Rahul ji has given his consent to contest from two seats, very happy to inform you that he will also contest from Wayanad in Kerala. #LokSabhaElections2019 pic.twitter.com/Rt7IDNxr0D
— ANI (@ANI) March 31, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.