ಪ್ರತ್ಯೇಕತೆಯಿಂದ ಐಸಿಸ್ ಉಗ್ರರ ಸೃಷ್ಟಿ: ರಾಹುಲ್ ವಿವಾದಾತ್ಮಕಹೇಳಿಕೆ
Team Udayavani, Aug 24, 2018, 6:35 AM IST
ಹೊಸದಿಲ್ಲಿ: ಜರ್ಮನಿಯ ಹ್ಯಾಂಬರ್ಗ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಹ್ಯಾಂಬರ್ಗ್‌ನ ಬುಸೆರಿಯಸ್ ಸಮ್ಮರ್ ಸ್ಕೂಲ್‌ನಲ್ಲಿ ಮಾತನಾಡಿದ ರಾಹುಲ್ ಅವರು, ಅಭಿವೃದ್ಧಿ ಪ್ರಕ್ರಿಯೆಯಿಂದ ಹೆಚ್ಚಿನ ಜನರನ್ನು ಹೊರಗಿಟ್ಟರೆ, ಐಸಿಸ್‌ನಂತಹ ಗುಂಪು ಹುಟ್ಟಿಕೊಳ್ಳುತ್ತದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಹುಲ್ ಅವರಿಂದ ಸ್ಪಷ್ಟನೆ ಕೋರಿದೆ.
‘ಅಭಿವೃದ್ಧಿಯಿಂದ ಹಿಂದುಳಿದವರು ಹಾಗೂ ದಲಿತರನ್ನು ದೂರವಿಡುತ್ತಿರುವುದರಿಂದ ಐಸಿಸ್‌ನಂತಹ ಬಂಡುಕೋರರು ದೇಶಾದ್ಯಂತ ಸೃಷ್ಟಿಯಾಗಲು ಕಾರಣವಾಗುತ್ತಿದೆೆ. ಇದು ಅಪಾಯಕಾರಿ ಸಂಗತಿ. 21ನೇ ಶತಮಾನದಲ್ಲಿ ನೀವು ಜನರಿಗೆ ಭವಿಷ್ಯ ಒದಗಿಸಲಾಗದಿದ್ದರೆ, ಇನ್ಯಾರೋ ಈ ಕೆಲಸ ಮಾಡುತ್ತಾರೆ. ಸಮಾಜದ ಉನ್ನತ ವರ್ಗದವರು ಪಡೆದಷ್ಟೇ ಅನುಕೂಲಗಳನ್ನು ಬುಡಕಟ್ಟು ಸಮಯದಾಯ, ಬಡ ರೈತರು, ಕೆಳ ವರ್ಗದ ಜನರು ಪಡೆಯುವುದು ಕೇಂದ್ರ ಸರಕಾರಕ್ಕೆ ಬೇಕಿಲ್ಲ’ ಎಂದೂ ರಾಹುಲ್ ಹೇಳಿದ್ದರು. ಅಲ್ಲದೆ, ಭಾರತದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಥಳಿಸಿ ಹತ್ಯೆ ಘಟನೆಗಳಿಗೆ ನಿರುದ್ಯೋಗ, ನೋಟು ಅಮಾನ್ಯದಿಂದಾಗಿ ಸಣ್ಣ ಉದ್ಯಮಗಳಿಗೆ ಉಂಟಾಗಿರುವ ಹಾನಿ ಹಾಗೂ ಜಿಎಸ್‌ಟಿಯನ್ನು ಕಳಪೆಯಾಗಿ ಜಾರಿಗೆ ತಂದಿದ್ದೇ ಕಾರಣ ಎಂದೂ ಕಾಂಗ್ರೆಸ್ ಅಧ್ಯಕ್ಷ ಆರೋಪಿಸಿದ್ದಾರೆ. ಸರಕಾರದ ಈ ಕ್ರಮಗಳಿಂದ ಸಿಟ್ಟಾದ ಜನರು ಹತ್ಯೆಗೆ ಮುಂದಾಗುತ್ತಿದ್ದಾರೆ ಎಂದಿದ್ದಾರೆ.
ಜರ್ಮನಿಯಲ್ಲಿ ಸುಳ್ಳು ಹೇಳಿದ ರಾಹುಲ್
ಜರ್ಮನಿಯಲ್ಲಿ ರಾಹುಲ್ ಗಾಂಧಿ ಸುಳ್ಳು ಹೇಳುತ್ತಿದ್ದಾರೆ. ಅಷ್ಟೇ ಅಲ್ಲ, ಅವರು ಭಯೋತ್ಪಾದನೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ನಮ್ಮ ಸಂಸ್ಕೃತಿಯ ಬಗ್ಗೆ ಕೆಟ್ಟದಾಗಿ ಮಾತನಾಡುವ ಮೂಲಕ ಭಾರತದ ಚಿತ್ರಣವನ್ನು ರಾಹುಲ್ ಹಾಳು ಮಾಡಿದ್ದಾರೆ. ರಾಹುಲ್ ಮಾತಿಗೆ ಯಾವ ಸಾಕ್ಷಿ ಅಥವಾ ಡೇಟಾ ಇರಲಿಲ್ಲ. ಬರಿ ಸುಳ್ಳು ಮಾಹಿತಿಯೇ ಇತ್ತು ಎಂದು ಪಾತ್ರ ಟೀಕಿಸಿದ್ದಾರೆ. ತಮ್ಮ ಹೇಳಿಕೆ ಕುರಿತು ಅವರು ಸ್ಪಷ್ಟನೆ ನೀಡಬೇಕು ಎಂದೂ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.