ಎತ್ತಿನಗಾಡಿಯಲ್ಲಿ ಕೂತು ರಾಹುಲ್ ರೋಡ್‌ಶೋ
Team Udayavani, Sep 26, 2017, 6:20 AM IST
ದ್ವಾರಕಾ: ಸದ್ಯದಲ್ಲೇ ವಿಧಾನಸಭೆ ಚುನಾವಣೆಯನ್ನು ಎದುರಿಸಲಿರುವ ಗುಜರಾತ್‌ನಲ್ಲಿ ಕಾಂಗ್ರೆಸ್‌ನ ಚುನಾವಣಾ ಪ್ರಚಾರ ರ್ಯಾಲಿಗೆ ಉಪಾಧ್ಯಕ್ಷ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ. ಸೋಮವಾರದಿಂದ 3 ದಿನಗಳ ಗುಜರಾತ್ ಪ್ರವಾಸ ಆರಂಭಿಸಿರುವ ಅವರು, ತೆರೆದ ಜೀಪಿನಲ್ಲಿ ಮೆರವಣಿಗೆ ನಡೆಸಲು ಅವಕಾಶ ನೀಡದ್ದಕ್ಕೆ ಪ್ರತಿಯಾಗಿ ಎತ್ತಿನಗಾಡಿ ಯಲ್ಲಿ ರೋಡ್ ಶೋ ನಡೆಸಿದರು. ಈ ಮೂಲಕ ರೈತ ಸಮುದಾಯದ ಒಲವನ್ನು ಗಳಿಸುವ ಪ್ರಯತ್ನವನ್ನೂ ಮಾಡಿದರು.
ಬೆಳಗ್ಗೆ ಪ್ರಸಿದ್ಧ ದ್ವಾರಕಾಧೀಶ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವ ಮೂಲಕ 3 ದಿನಗಳ ಅಭಿಯಾನ ಆರಂಭಿಸಿದರು. ದ್ವಾರಕಾದಿಂದ ಜಾಮ್‌ನಗರದವರೆಗೆ ಎತ್ತಿನಗಾಡಿಯಲ್ಲಿ ರೋಡ್ ಶೋ ನಡೆಸಿದ ರಾಹುಲ್ ಅವರು, ನೋಟುಗಳ ಅಮಾನ್ಯ, ಜಿಎಸ್‌ಟಿ, ಗುಜರಾತ್ ಮಾದರಿ ಅಭಿವೃದ್ಧಿ ಮತ್ತಿತರ ವಿಚಾರಗಳ ನ್ನೆತ್ತಿಕೊಂಡು ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದರು. ರಾಹುಲ್ ಗುಜರಾತ್‌ಗೆ ಆಗಮಿಸುತ್ತಿದ್ದಂತೆ ಅವರನ್ನು ಮೀಸಲು ಪರ ಹೋರಾಟಗಾರ ಹಾರ್ದಿಕ್ ಪಟೇಲ್ ಟ್ವೀಟ್ ಮೂಲಕ ಸ್ವಾಗತಿಸಿದ್ದು ವಿಶೇಷವಾಗಿತ್ತು.
ಎಲ್ಲೆಡೆ ಖಾಸಗೀಕರಣ: ಗುಜರಾತ್ ಬಿಜೆಪಿ ಸರಕಾರವನ್ನು ಟೀಕಿಸಿದ ರಾಹುಲ್, “ಇಲ್ಲಿ ಎಲ್ಲವೂ ಖಾಸಗೀಕರಣಗೊಳ್ಳುತ್ತಿದೆ. ಅಗ್ಗದ ದರದಲ್ಲಿ ಶಿಕ್ಷಣ, ಆರೋಗ್ಯ ಸೇವೆ ಪಡೆಯುವ ಬಡಜನರ ಹಕ್ಕನ್ನು ಕಸಿದುಕೊಂಡು ಖಾಸಗೀಕರಣವನ್ನು ಪರಿಚಯಿಸಲಾಗುತ್ತಿದೆ. ಇದು ಬಿಜೆಪಿಯ ರೈತ ವಿರೋಧಿ, ಬಡವರ ವಿರೋಧಿ ಧೋರಣೆಗೆ ಸಾಕ್ಷಿ,’ ಎಂದರು. ನೋಟು ಅಮಾನ್ಯದಿಂದ ತೊಂದರೆಯಾಗಿದ್ದು ಬಡವರು ಹಾಗೂ ರೈತರಿಗೆ. ಅವರು ಎಲ್ಲ ವ್ಯವಹಾರಗಳಿಗೂ ನಗದನ್ನೇ ಬಳಸುತ್ತಾರೆಯೇ ಹೊರತು, ಫೋನ್, ಡೆಬಿಟ್ ಕಾರ್ಡ್ ಮೂಲಕ ವಹಿವಾಟು ನಡೆಸಲು ಅವರಿಂ ದಾಗದು. ಇದನ್ನು ಅರ್ಥಮಾಡಿಕೊಳ್ಳದೇ ಡಿಜಿಟಲೀಕರಣದತ್ತ ಮುಖಮಾಡಿ ಎಂದರೆ ಹೇಗೆ ಎಂದು ಪ್ರಶ್ನಿಸಿದರು.
ರಾಹುಲ್ ಅವರ ಗುಜರಾತ್ ಭೇಟಿಯು ಕಾಂಗ್ರೆಸ್‌ಗೆ ವಿಶ್ವಾಸಾರ್ಹ ಸ್ಥಳೀಯ ನಾಯಕರಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ.
– ವಿಜಯ್ ರೂಪಾನಿ, ಗುಜರಾತ್ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.