ರಾಜೀನಾಮೆಗೆ ರಾಹುಲ್ ನಾಂದಿ!
ಕರ್ನಾಟಕದ ಬೆಳವಣಿಗೆಗೂ ಬಿಜೆಪಿಗೂ ಸಂಬಂಧವಿಲ್ಲ:ಲೋಕಸಭೆಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್
Team Udayavani, Jul 9, 2019, 6:00 AM IST
ಹೊಸದಿಲ್ಲಿ: ಕರ್ನಾಟಕದ ರಾಜಕೀಯ ಬಿಕ್ಕಟ್ಟು ಸೋಮವಾರ ಸಂಸತ್‌ನಲ್ಲೂ ಪ್ರತಿಧ್ವನಿಸಿದೆ. ಬಿಕ್ಕಟ್ಟಿಗೆ ಬಿಜೆಪಿ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದರೆ, ನಮಗೂ ಬಿಕ್ಕಟ್ಟಿಗೂ ಸಂಬಂಧವೇ ಇಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.
ಲೋಕಸಭೆಯಲ್ಲಿ ಈ ವಿಚಾರ ಪ್ರಸ್ತಾವಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ಪತನಗೊಳಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ರಹಸ್ಯ ಸಂಚು ರೂಪಿಸಿದೆ. ನಮ್ಮ ಶಾಸಕರನ್ನು ಮುಂಬಯಿಯ ಹೊಟೇಲ್ಗೆ ಕರೆದೊಯ್ಯಲಾಗಿದೆ. ಶಾಸಕರು ರಾಜ್ಯಪಾಲರನ್ನು ಭೇಟಿಯಾದ ಮರುಕ್ಷಣವೇ ಅವರಿಗೆ ವಾಹನ, ವಿಮಾನ, ಹೊಟೇಲ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆರೋಪಿಸಿದರು.
ರಾಜೀನಾಮೆಗೆ ನಾಂದಿ ಹಾಡಿದ್ದು ರಾಹುಲ್
ಚೌಧರಿ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕರ್ನಾಟಕದ ಬೆಳವಣಿಗೆಗಳಿಗೂ ಬಿಜೆಪಿಗೂ ಸಂಬಂಧವಿಲ್ಲ. ನಾವು ಯಾವುದೇ ಶಾಸಕ ಅಥವಾ ಸಂಸದನಿಗೆ ಪಕ್ಷಾಂತರ ಮಾಡುವಂತೆ ಒತ್ತಡ ಹಾಕಿಲ್ಲ. ನಮ್ಮ ಸರಕಾರವು ಸಂಸತ್‌ನ ಪಾವಿತ್ರ್ಯವನ್ನು ರಕ್ಷಿಸುವಲ್ಲಿ ಬದ್ಧವಾಗಿದೆ ಎಂದರು. ಅಲ್ಲದೆ, ರಾಜೀನಾಮೆ ಪರ್ವಕ್ಕೆ ನಾಂದಿ ಹಾಡಿದ್ದೇ ರಾಹುಲ್ ಗಾಂಧಿ ಎಂದು ಹೇಳುವ ಮೂಲಕ ಲೇವಡಿ ಮಾಡಿದರು. ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಪ್ರಜಾತಂತ್ರ ಉಳಿಸಿ ಎಂಬ ಫಲಕಗಳನ್ನು ಹಿಡಿದುಕೊಂಡು ಘೋಷಣೆ ಕೂಗತೊಡಗಿದರು.
ಕರ್ನಾಟಕದಲ್ಲಿ ಏನು ನಡೆಯುತ್ತಿದೆಯೋ ಅದಕ್ಕೆ ಅದೇ ಪಕ್ಷಗಳ ಕೆಲವು ನಾಯಕರಲ್ಲಿನ ಮಹತ್ವಾಕಾಂಕ್ಷೆಗಳೇ ಕಾರಣ ಎಂಬುದು ಎಲ್ಲರಿಗೂ ಗೊತ್ತು. ನಾವು ಏನನ್ನೂ ಮಾಡುತ್ತಿಲ್ಲ. ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ ಅಷ್ಟೆ.
– ರಾಮ್‌ಮಾಧವ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.