Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

ತಮ್ಮ ಪಕ್ಷದ ನಿಲುವು ಉತ್ತರ ಪ್ರದೇಶ, ಬಿಹಾರ ಅಥವಾ ಇತರ ರಾಜ್ಯಗಳ ಜನರ ವಿರುದ್ಧವಾಗಿಲ್ಲ...

Team Udayavani, Nov 17, 2024, 6:06 PM IST

1-balaaaa

ಮುಂಬಯಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಹೊರಹೊಮ್ಮುವ ಹೊಸ ಶಕ್ತಿ ಸಮೀಕರಣಗಳಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಅಧ್ಯಕ್ಷ ರಾಜ್ ಠಾಕ್ರೆ ಪ್ರಮುಖ ಪಾತ್ರ ವಹಿಸಬಹುದು ಎಂದು ಎಂಎನ್‌ಎಸ್ ಅಭ್ಯರ್ಥಿ, ಹಿರಿಯ ನಾಯಕ ಬಾಳಾ ನಂದಗಾಂವ್ಕರ್ ಹೇಳಿದ್ದಾರೆ.

ನಂದಗಾಂವ್ಕರ್ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ‘ಮುಂಬೈನ ಸೀಮಿತ ಭೂಮಿ ಮತ್ತು ಹೆಚ್ಚಿನ ಜನಸಾಂದ್ರತೆಯನ್ನು ಗಮನಿಸಿ ತಮ್ಮ ಪಕ್ಷದ ನಿಲುವು ಉತ್ತರ ಪ್ರದೇಶ, ಬಿಹಾರ ಅಥವಾ ಇತರ ರಾಜ್ಯಗಳ ಜನರ ವಿರುದ್ಧವಾಗಿಲ್ಲ ಮತ್ತು ಅವರ ಹಿಂದಿನ ಆಂದೋಲನವು ಶಿವಡಿ ಕ್ಷೇತ್ರದಲ್ಲಿ ಯಾರಿಗೂ ಹಾನಿಯನ್ನುಂಟುಮಾಡಲಿಲ್ಲ. ಎಂಎನ್‌ಎಸ್ ಮತ್ತು ರಾಜ್ ಠಾಕ್ರೆ ಇಬ್ಬರೂ ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಹೆಚ್ಚು ಎತ್ತರಕ್ಕೆ ಏರುತ್ತಾರೆ’ ಎಂದು ಪ್ರತಿಪಾದಿಸಿದ್ದಾರೆ.

“ಈ ಚುನಾವಣೆಯಲ್ಲಿಯೇ ಹಲವಾರು ನಾಯಕರು ಮನೆಯಲ್ಲಿ ಕುಳಿತುಕೊಳ್ಳುವುದನ್ನು ನೀವು ನೋಡುತ್ತೀರಿ. ಒಳ್ಳೆಯ ಜನರು ರಾಜಕೀಯಕ್ಕೆ ಬರುತ್ತಾರೆ. ಅಲ್ಲದೆ, ಈ ವಿಧಾನಸಭಾ ಚುನಾವಣೆಯ ನಂತರ ರಾಜ್ ಠಾಕ್ರೆ ಹೊಸ ಶಕ್ತಿ ಸಮೀಕರಣಗಳಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ಮಾಜಿ ನಾಲ್ಕು ಅವಧಿಯ ಶಾಸಕ ನಂದಗಾಂವ್ಕರ್ ಮಧ್ಯ ಮುಂಬೈನ ಲಾಲ್‌ಬಾಗ್‌ನಲ್ಲಿರುವ ಎಂಎನ್‌ಎಸ್ ಕಚೇರಿಯಲ್ಲಿ ಪಿಟಿಐಗೆ ಹೇಳಿಕೆ ನೀಡಿದ್ದಾರೆ.

ನಂದಗಾಂವ್ಕರ್ ಅವರು ಶಿವಸೇನಾ (ಯುಬಿಟಿ) ಅಭ್ಯರ್ಥಿ ಮತ್ತು ಮೂರನೇ ಅವಧಿಗೆ ಸ್ಪರ್ಧಿಸುತ್ತಿರುವ ಹಾಲಿ ಶಾಸಕ ಅಜಯ್ ಚೌಧರಿ ವಿರುದ್ಧ ಕಣಕ್ಕಿಳಿದಿದ್ದಾರೆ.ಚೌಧರಿ ಅವರು 2014 ರ ವಿಧಾನಸಭಾ ಚುನಾವಣೆಯಲ್ಲಿ ನಂದಗಾಂವ್ಕರ್ ಅವರನ್ನು ಸೋಲಿಸಿದ್ದರು. ಕಾಲು ಮುರಿತದಿಂದ ಗಾಲಿಕುರ್ಚಿಯಲ್ಲಿ ಕುಳಿತು ಪ್ರಚಾರ ನಡೆಸಿರುವ ನಂದಗಾಂವಕರ್ ಅವರು ಮನೆ ಮನೆಗೆ ಭೇಟಿ ನೀಡುವ ಮೂಲಕ ಕ್ಷೇತ್ರದ ಶೇ.70 ರಷ್ಟು ಪ್ರಚಾರ ಕಾರ್ಯ ನಿರ್ವಹಿಸಿದ್ದಾರೆ. ಅವರ ಪುತ್ರಿ ಸೃಷ್ಟಿ ಅವರು ಮನೆ-ಮನೆಗೆ ತೆರಳಿ ಮತಯಾಚನೆಯನ್ನು ಮುಂದುವರೆಸಿದ್ದು, ಸ್ಪೀಕರ್ ಬಳಸಿ ಕಟ್ಟಡಗಳಲ್ಲಿ ಕೆಳ ಮಹಡಿಯಿಂದ ಮತದಾರರಿಗೆ ಮನವಿ ಮಾಡುತ್ತಿದ್ದಾರೆ.

‘ಅಜಾನ್’ ಧ್ವನಿವರ್ಧಕಗಳ ವಿರುದ್ಧ ಒಂದೆರಡು ವರ್ಷಗಳ ಹಿಂದೆ ಎಂಎನ್‌ಎಸ್ ಪ್ರತಿಭಟನೆ ಮತ್ತು ಪಕ್ಷದ ಹಿಂದುತ್ವದ ಪರವಾದ ನಿಲುವನ್ನು ಪರಿಗಣಿಸಿ ಮುಸ್ಲಿಮರು ಅವರಿಗೆ ಮತ ಹಾಕುತ್ತಾರೆಯೇ ಎಂಬ ಪ್ರಶ್ನೆಗೆ,ಉತ್ತರಿಸಿದ ನಂದಗಾಂವ್ಕರ್ ಇದು ಪಕ್ಷದ ಮಟ್ಟದಲ್ಲಿನ ಸಮಸ್ಯೆಯಾಗಿದೆ ಮತ್ತು ಕ್ಷೇತ್ರದ ಅಂಶವಲ್ಲ ಎಂದು ಹೇಳಿದರು.

1995 ರಲ್ಲಿ ಇಲ್ಲಿನ ಮಜಗಾಂವ್ ವಿಧಾನಸಭಾ ಕ್ಷೇತ್ರದಿಂದ ಶಿವಸೇನಾ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧಿಸಿದ್ದಾಗ ಪ್ರಬಲ ನಾಯಕ ಛಗನ್ ಭುಜಬಲ್ ಅವರನ್ನು ಸೋಲಿಸಿದಾಗ ನಂದಗಾಂವ್ಕರ್ ‘ದೈತ್ಯ ಸಂಹಾರಿ’ ಎಂಬ ಖ್ಯಾತಿಯನ್ನು ಗಳಿಸಿದ್ದರು.ಅವರು ಈಗ ಆರನೇ ವಿಧಾನಸಭಾ ಚುನಾವಣೆಯಲ್ಲಿ ಮತ್ತು ಮೂರನೇ ಬಾರಿಗೆ ಶಿವಡಿಯಿಂದ ಸ್ಪರ್ಧಿಸುತ್ತಿದ್ದಾರೆ, ಅವರು 2009 ರಲ್ಲಿ ಗೆದ್ದಿದ್ದರು ಆದರೆ 2014 ರಲ್ಲಿ ಸೋಲು ಕಂಡಿದ್ದರು.

MNS ಪಕ್ಷವು ಅಸ್ತಿತ್ವಕ್ಕೆ ಬಂದ ನಂತರ ಅದರ ಮೊದಲ ರಾಜ್ಯ ಚುನಾವಣೆ 2009 ರಲ್ಲಿ 288 ರಲ್ಲಿ 13 ವಿಧಾನಸಭಾ ಸ್ಥಾನಗಳನ್ನು ಗೆದ್ದುಕೊಂಡಿತ್ತು ಆದರೆ 2019ರಲ್ಲಿ ಕೇವಲ 1 ಸ್ಥಾನ ಪಡೆದಿತ್ತು. MNS ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿಯನ್ನು ಬೆಂಬಲಿಸಿತ್ತಾದರೂ ಈಗ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿದೆ.

ಟಾಪ್ ನ್ಯೂಸ್

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.