ಗಲಭೆ ತನಿಖೆಗೆ ಸಮಿತಿ ರಚಿಸಲಿ
Team Udayavani, May 6, 2022, 6:27 AM IST
ಜೈಪುರ: “ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ತಾಕತ್ತಿದ್ದರೆ ಏಳು ರಾಜ್ಯಗಳಲ್ಲಿ ನಡೆದ ಗಲಭೆ ಪ್ರಕರಣಗಳ ತನಿಖೆಗೆ ಸಮಿತಿ ರಚಿಸಲಿ. ಕರೌಲಿ ಮತ್ತು ಜೋಧ್ಪುರ ಗಲಾಟೆ ಪ್ರಕರಣಗಳು ಸಣ್ಣ ವಿಚಾರ’ ಹೀಗೆಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಜೈಪುರದಲ್ಲಿ ಗುರುವಾರ ಮಾತನಾಡಿದ ಅವರು, ಕರೌಲಿಯಲ್ಲಿನ ಘಟನೆ ಒಂದು ಪ್ರಯೋಗ ಎಂದು ಬಣ್ಣಿಸಿದ್ದಾರೆ. ಅದೇ ಮಾದರಿಯಲ್ಲಿ ಏಳು ರಾಜ್ಯಗಳಲ್ಲಿ ಘಟನೆಗಳು ನಡೆದಿವೆ. ಅವುಗಳ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಿತಿ ರಚಿಸಲಿ ಎಂದು ಸವಾಲು ಹಾಕಿದ್ದಾರೆ ಗೆಹ್ಲೋಟ್.
ಮತ್ತೂಂದು ಗಲಾಟೆ: ರಾಜಸ್ಥಾನದ ಭಿಲ್ವಾರಾದ ಸಾಂಗನೇರ್ ಎಂಬಲ್ಲಿ ಅಹಿತಕರ ಘಟನೆ ನಡೆದಿದೆ. ಒಂದು ಕೋಮಿನ ಇಬ್ಬರು ಯುವಕರಿಗೆ ಎಂಟು ಮಂದಿ ಇದ್ದ ಗುಂಪು ಬುಧವಾರ ರಾತ್ರಿ ಥಳಿಸಿದೆ. ಜತೆಗೆ ಒಂದು ಬೈಕ್ಗೆ ಬೆಂಕಿ ಹಚ್ಚಿ ಪರಾರಿಯಾಗಿದೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಕೂಡಲೇ ಜಿಲ್ಲಾಡಳಿತ ಹೆಚ್ಚುವರಿ ಪೊಲೀಸರನ್ನು ಕರೆತಂದು ಬಂದೋಬಸ್ತ್ ಏರ್ಪಡಿಸಿದೆ.
ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಇಂಟರ್ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸಿ, ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಇನ್ನೊಂದೆಡೆ ಜೋಧ್ಪುರ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು 211ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.