Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
Team Udayavani, Dec 24, 2024, 8:09 PM IST
ಜೈಪುರ:ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ ರೈತನಿಗೆ ಈಗ ಪೊಲೀಸರೇ ಶಾಕ್ ನೀಡಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ವಿದ್ಯಾಧರ್ ಯಾದವ್ ಎಂಬವರ ಭೂಮಿಯನ್ನು ಸಿಮೆಂಟ್ ಘಟಕವೊಂದರ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಭೂಮಿಗೆ ನೀಡಲಾಗುವ ಪರಿಹಾರ ಮೊತ್ತದ ವಿಚಾರದಲ್ಲಿ ವಿವಾದ ಉಂಟಾಗಿತ್ತು. ಅದನ್ನು ಬೇಗ ಇತ್ಯರ್ಥಗೊಳಿಸಿ, ಇಲ್ಲವೇ ನನಗೆ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಯಾದವ್ ಕೋರಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಸೇರಿದಂತೆ 97 ಮಂದಿ ಪೊಲೀಸರು ಯಾದವ್ ಮನೆಗೆ ಧಾವಿಸಿ, ಭದ್ರತೆ ಒದಗಿಸಿದ್ದರು.
ಈಗ ಭದ್ರತೆಗೆ ಬರೋಬ್ಬರಿ 9.91 ಲಕ್ಷ ರೂ. ವೆಚ್ಚವಾಗಿದ್ದು, ಅದನ್ನು ಭರಿಸುವಂತೆ ಸೂಚಿಸಿ ಯಾದವ್ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಯಾದ್, “ನಾನೇನೂ ಪೊಲೀಸ್ ರಕ್ಷಣೆಗೆ ಮನವಿ ಮಾಡಿಕೊಂಡಿರಲಿಲ್ಲ. ಅವರೇ ಬಂದು ಭದ್ರತೆ ಒದಗಿಸಿದ್ದಕ್ಕೆ ನಾನೇನು ಮಾಡಲಿ’ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.