ರಾಜಸ್ಥಾನ : ಗುಜ್ಜರ್ ಸಹಿತ 5 ಸಮುದಾಯಗಳಿಗೆ ಶೇ.1 ಮೀಸಲಾತಿ
Team Udayavani, Jul 2, 2018, 6:57 PM IST
ಜೈಪುರ : ಅತೀ ಹಿಂದುಳಿದ ವರ್ಗಗಳ ಕೆಟಗರಿಯಡಿ ರಾಜಸ್ಥಾನ ಸರಕಾರ ಇಂದು ಸೋಮವಾರ ಗುಜ್ಜರ್ ಸಮುದಾಯ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿಗೆ ಅನುಮೋದನೆ ನೀಡಿದೆ.
ಇದೇ ಜುಲೈ 7ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜೈಪುರ ರಾಲಿ ನಡೆಯುವುದಕ್ಕೆ ಪೂರ್ವಭಾವಿ ಎಂಬಂತೆ ಈ ಮೀಸಲಾತಿಯನ್ನು ರಾಜಸ್ಥಾನ ಸರಕಾರ ಪ್ರಕಟಿಸಿದೆ.
ಪ್ರಧಾನಿ ಮೋದಿ ಅವರ ರಾಲಿ ನಡೆಯುವ ತಾಣದಲ್ಲೇ ತಾವು ಮೀಸಲಾತಿಯನ್ನು ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಗುಜ್ಜರ್ ಸಮುದಾಯದವರು ಈ ಮೊದಲು ಬೆದರಿಕೆ ಹಾಕಿದ್ದರು.
ಪ್ರಧಾನಿ ಮೋದಿ ಅವರು ತಮ್ಮ ರಾಲಿ ನಡೆಯುವ ತಾಣದಲ್ಲೇ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಭೇಟಿಯಾಗುವರು.
ಶೇ. 1ರ ಮೀಸಲಾತಿಯ ಲಾಭ ಪಡೆಯುವ ಸಮುದಾಯಗಳೆಂದರೆ ಗೋದಿಯಾ ಲೋಹರ್, ಬಂಜಾರಾ, ಗುಜ್ಜರ್, ರೈಕಾ ಮತ್ತು ಗಡಾರಿಯಾ.
ಈ ಸಮುದಾಯಗಳಿಗೆ ಶೇ.1ರ ಮೀಸಲಾತಿಯನ್ನು ಕಲ್ಪಿಸುವ ದಿಶೆಯಲ್ಲಿ ಸರಕಾರ ಎರಡು ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಮೊದಲನೇಯದು ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಕ್ಕೆ ಸಂಬಂಧಿಸಿದ ಮೀಸಲಾತಿ. ಎರಡನೇದು ಸರಕಾರಿ ಉದ್ಯೋಗಗಳಲ್ಲಿನ ಮೀಸಲಾತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.