RSS activities; ಸರಕಾರಿ ನೌಕರರಿಗಿದ್ದ ನಿಷೇಧ ಹಿಂತೆಗೆದುಕೊಂಡ ರಾಜಸ್ಥಾನ ಸರಕಾರ
Team Udayavani, Aug 24, 2024, 5:45 PM IST
ಜೈಪುರ: ಸರಕಾರಿ ನೌಕರರು ಆರ್ ಎಸ್ ಎಸ್(RSS) ಚಟುವಟಿಕೆಗಳಲ್ಲಿ ಭಾಗವಹಿಸುವ ಮೇಲೆ ಹೇರಲಾಗಿದ್ದ ನಿಷೇಧವನ್ನು ರಾಜಸ್ಥಾನದ ಬಿಜೆಪಿ(BJP) ಸರಕಾರ ತೆಗೆದುಹಾಕಿದೆ.
ಹಿಂದಿನ ಆದೇಶಗಳನ್ನು ಉಲ್ಲೇಖಿಸಿ ಸಿಬಂದಿ ಇಲಾಖೆಯ ಜಂಟಿ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಕಾವಿಯಾ ಅವರು 52 ವರ್ಷಗಳ ನಿಷೇಧವನ್ನು ತೆಗೆದುಹಾಕಿರುವ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯ ಪ್ರಕಾರ, 1972 ಮತ್ತು 1981 ರ ಸೂಚನೆಗಳನ್ನು ಪರಿಶೀಲಿಸಿ, ಈ ಹಿಂದೆ ಚಟುವಟಿಕೆಗಳನ್ನು ನಿಷೇಧಿಸಿದ ಸಂಘಟನೆಗಳ ಪಟ್ಟಿಯಿಂದ ಆರ್‌ಎಸ್‌ಎಸ್ ಹೆಸರನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ.
ಈ ಹಿಂದೆ ಕೇಂದ್ರ ಸರಕಾರ ಸರಕಾರಿ ನೌಕರರು ಆರ್ ಎಸ್ ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವ ನಿರ್ಬಂಧವನ್ನು ಹಿಂಪಡೆದಿತ್ತು. 1966ರ ನವೆಂಬರ್‌ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಆಡಳಿತಾವಧಿಯಲ್ಲಿ ಹೇರಲಾಗಿದ್ದ ನಿಷೇಧವನ್ನು ಸಿಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ತೆಗೆದುಹಾಕಿತ್ತು.
ಹರಿಯಾಣ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ಸೇರಿದಂತೆ ಹಲವಾರು ರಾಜ್ಯ ಸರಕಾಗಳು ಈಗಾಗಲೇ ಸರಕಾರಿ ನೌಕರರು ಆರ್‌ಎಸ್‌ಎಸ್‌ಗೆ ಸಂಬಂಧಿಸಿರುವ ನಿರ್ಬಂಧಗಳನ್ನು ತೆಗೆದುಹಾಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.