ಸಾಯುತ್ತಿದ್ದ 3 ಗಾಯಾಳುಗಳೊಂದಿಗೆ ರಾಜಸ್ಥಾನ ಯುವಕನ ಸೆಲ್ಫಿ, ವೈರಲ್
Team Udayavani, Jul 11, 2018, 3:20 PM IST
ಜೈಪುರ : ಯುವ ಜನರ ಸೆಲ್ಫಿ ಹುಚ್ಚು ಮನುಕುಲವೇ ನಾಚುವಂತೆ ಮಾಡುವ ಮಟ್ಟಕ್ಕೆ ಮುಟ್ಟಿದೆ ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ರಸ್ತೆಯಲ್ಲಿ ಒದ್ದಾಡುತ್ತಾ ಸಾಯುವ ಅಂತಿಮ ಸ್ಥಿತಿಯಲ್ಲಿದ್ದ ಮೂವರೊಂದಿಗೆ ರಾಜಸ್ಥಾನದ ಯುವಕನೋರ್ವ ಸೆಲ್ಫಿ ತೆಗೆದುಕೊಂಡ ಫೋಟೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಈ ದೃಶ್ಯವನ್ನು ಕುತೂಹಲದಿಂದ ಎಂಬಂತೆ ನಿಶ್ಚಿಂತರಾಗಿ ನೋಡುತ್ತಿದ್ದವರ ಚಿತ್ರಗಳು ಕೂಡ ಸೆಲ್ಫಿಯಲ್ಲಿ ದಾಖಲಾಗಿದೆ.
ಇಷ್ಟು ಮಂದಿ ನಿಜಕ್ಕೂ ಮಾನವೀಯ ಕಳಕಳಿಯಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಒಯ್ದಿದ್ದರೆ ಅವರು ಬದುಕುವುದು ಸಾಧ್ಯವಿತ್ತು ಎಂದು ಪೊಲೀಸರು ಹೇಳಿದ್ದಾರೆ. ಇಂದಿನ ಯುವ ಜನರಿಗೆ ಎಂತಹ ಪ್ರತಿಕೂಲ ಸ್ಥಿತಿಯಲ್ಲೂ, ಮಾನವೀಯ ಕಾಳಜಿಯನ್ನು ಮರೆತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಹುಚ್ಚು ಇರುವುದು ಇಂದು ಅತಿರೇಕದ ಮಟ್ಟಕ್ಕೆ ತಲುಪಿರುವ ಪರಿಣಾಮವಾಗಿ ಅನೇಕ ಮಂದಿ ಸೆಲ್ಫಿಗೆ ಬಲಿಯಾಗುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮನೋ ಶಾಸ್ತ್ರಜ್ಞರು ಹೇಳುವ ಪ್ರಕಾರ ಸೆಲ್ಫಿ ಹುಚ್ಚು ಒಂದು ಬಗೆಯ ಮನೋಸ್ಥಿತಿ. ಇದರ ಅತೀವ ಹುಚ್ಚಿನಿಂದ ಹಲವರ ಸಾವಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Kabaddi: ಇಂದು ಸೀನಿಯರ್ ಕಬಡ್ಡಿ ತಂಡದ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.