Tribal Woman: ಪತ್ನಿಯನ್ನು ವಿವಸ್ತ್ರಗೊಳಿಸಿ ಊರೆಲ್ಲಾ ಮೆರವಣಿಗೆ ಮಾಡಿದ ಪತಿ, ಮೂವರ ಬಂಧನ
Team Udayavani, Sep 2, 2023, 10:22 AM IST
ರಾಜಸ್ಥಾನ: ತನ್ನ ಪತ್ನಿಯನ್ನೇ ಸಾರ್ವಜನಿಕವಾಗಿ ಥಳಿಸಿ, ವಿವಸ್ತ್ರಗೊಳಿಸಿ ಊರೆಲ್ಲಾ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಮಹಿಳೆಯ ಪತಿ, ಅತ್ತೆ ಹಾಗೂ ಮಾವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಏನಿದು ಪ್ರಕರಣ:
ಕಳೆದ ಸೋಮವಾರ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸಂತ್ರಸ್ತ ಮಹಿಳೆ ಕಳೆದ ವರ್ಷ ವಿವಾಹವಾಗಿದ್ದು ಮಹಿಳೆ ನೆರೆಹೊರೆಯ ಪುರುಷನೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಿ ಆಕೆಯ ಪತಿ ಮತ್ತು ಅತ್ತೆ ಸೇರಿಕೊಂಡು ಮಹಿಳೆಗೆ ಥಳಿಸಿದ್ದಾರೆ. ಅಲ್ಲದೆ ಆರೋಪಿಗಳು ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ ಅಮಾನವೀಯ ಘಟನೆಯ ವಿಡಿಯೋ ಕೂಡ ಪತಿಯ ಜೊತೆಗಿದ್ದ ಇತರ ಯುವಕರು ಸೆರೆ ಹಿಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಘಟನೆಗೆ ಸಂಬಂಧಿಸಿ ಮಹಿಳೆಯ ಪತಿ ಅತ್ತೆ ಹಾಗೂ ಮಾವನನ್ನು ವಶಕ್ಕೆ ಪಡೆದುಕೊಂಡ ಪೊಲೀಸರು, ಕೃತ್ಯಕ್ಕೆ ಸಹಕರಿಸಿದ ಇತರ ಏಳು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಒಟ್ಟು 10 ಜನರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಅಶ್ಲೀಲ ಕಾಯ್ದೆ), 354 (ಮಹಿಳೆಯರ ಮೇಲೆ ಹಲ್ಲೆ), 365 (ಅಪಹರಣ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 (ಅಶ್ಲೀಲ ವಸ್ತುಗಳನ್ನು ರವಾನಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ರಾಜಸ್ಥಾನದ ಪ್ರತಾಪ್‌ಗಢ ಡಿಜಿಪಿ ಉಮೇಶ್ ಮಿಶ್ರಾ ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಖಂಡನೆ
ರಾಜಸ್ಥಾನದಲ್ಲಿ ನಡೆದ ಘಟನೆ ಬಗ್ಗೆ ಹೇಳಿಕೆ ನೀಡಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇದೊಂದು ಹೇಯ ಕೃತ್ಯ ಈ ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಅವರೆಲ್ಲರಿಗೂ ಕಠಿಣ ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: Alert: ಸಾರ್ವಜನಿಕರೇ ಎಚ್ಚರ! ಬಂಟಕಲ್ಲು ಪರಿಸರದಲ್ಲಿ ಹುಚ್ಚು ನಾಯಿ ಹಾವಳಿ, ಇಬ್ಬರಿಗೆ ಗಾಯ
प्रतापगढ़ जिले में पीहर और ससुराल पक्ष के आपसी पारिवारिक विवाद में ससुराल पक्ष के लोगों द्वारा एक महिला को निर्वस्त्र करने का एक वीडियो सामने आया है।
पुलिस महानिदेशक को एडीजी क्राइम को मौके पर भेजने एवं इस मामले में कड़ी से कड़ी कार्रवाई के निर्देश दिए हैं।
सभ्य समाज में इस…
— Ashok Gehlot (@ashokgehlot51) September 1, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.