Femina Miss India World-2023 ಕಿರೀಟ ಮುಡಿಗೇರಿಸಿಕೊಂಡ ರಾಜಸ್ಥಾನದ Nandini Gupta
Team Udayavani, Apr 16, 2023, 12:04 PM IST
ಮಣಿಪುರ: ರಾಜಸ್ಥಾನ ಕೋಟಾದ 19 ವರ್ಷದ ನಂದಿನಿ ಗುಪ್ತಾ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2023 ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ದೆಹಲಿಯ ಶ್ರೇಯಾ ಪೂಂಜಾ ಮೊದಲ ರನ್ನರ್ ಅಪ್ ಮತ್ತು ಎರಡನೇ ರನ್ನರ್ ಅಪ್ ಕಿರೀಟ ಮಣಿಪುರದ ತೌನೊಜಮ್ ಸ್ಟ್ರೆಲಾ ಲುವಾಂಗ್ ಅವರಿಗೆ ಲಭಿಸಿದೆ.
ಭಾರತದ ಅತ್ಯಂತ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಯ 59 ನೇ ಆವೃತ್ತಿಯಲ್ಲಿ ನಂದಿನಿ ಭಾರತದ ಹೊಸ ಸೌಂದರ್ಯ ರಾಣಿ ಕಿರೀಟವನ್ನು ಪಡೆದರು.
ಕಳೆದ ವರ್ಷ ಮಿಸ್ ಇಂಡಿಯಾ ವರ್ಲ್ಡ್ ಕಿರೀಟ ಕರ್ನಾಟಕದ ಸಿನಿ ಶೆಟ್ಟಿಗೆ ಒಲಿದು ಬಂದಿತ್ತು.
ಮಣಿಪುರದ ಇಂಫಾಲ್‌ನ ಖುಮಾನ್ ಲಂಪಾಕ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹಲವು ಸಿನಿ ಗಣ್ಯರು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ 29 ರಾಜ್ಯಗಳ ಸುಂದರಿಯರು ಸ್ಪರ್ಧಿಸಿದ್ದರು.
ತೀರ್ಪುಗಾರರ ಸಮಿತಿಯು ನೇಹಾ ಧೂಪಿಯಾ, ನೃತ್ಯ ನಿರ್ದೇಶಕ ಟೆರೆನ್ಸ್ ಲೂಯಿಸ್, ಚಲನಚಿತ್ರ ನಿರ್ದೇಶಕ ಹರ್ಷವರ್ಧನ್ ಕುಲಕರ್ಣಿ, ಬಾಕ್ಸರ್ ಲೈಶ್ರಾಮ್ ಸರಿತಾ ದೇವಿ ಮತ್ತು ವಿನ್ಯಾಸಕರಾದ ರಾಕಿ ಸ್ಟಾರ್ ಮತ್ತು ನಮ್ರತಾ ಜೋಶಿಪುರ ಅವರನ್ನು ಒಳಗೊಂಡಿತ್ತು.
ನಂದಿನಿ ಗುಪ್ತಾ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ವಿಶ್ವ ಸುಂದರಿ ಸ್ಪರ್ಧೆಯ 71 ನೇ ಆವೃತ್ತಿಯು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಈ ವರ್ಷ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.