ರಾಜಸ್ಥಾನ ಮತ್ತು ತೆಲಂಗಾಣ: ಗಣ್ಯರಿಂದ ಹಕ್ಕು ಚಲಾವಣೆ
Team Udayavani, Dec 7, 2018, 10:33 AM IST
ಜೈಪುರ /ಹೈದರಾಬಾದ್: ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆಗೆ ಶುಕ್ರವಾರ ಮತದಾನ ನಡೆಯುತ್ತಿದ್ದು ಮಧ್ಯಾಹ್ನದವರೆಗೆ ಶಾಂತಿಯುತ ಮತದಾನ ನಡೆಯುತ್ತಿರುವ ಬಗ್ಗೆ ವರದಿಯಾಗಿದೆ.ಉಭಯ ರಾಜ್ಯಗಳಲ್ಲೂ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ತೆಲಂಗಾಣದಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ 49.15 ಶೇಕಡಾ ಮತದಾನವಾಗಿದ್ದರೆ, ರಾಜಸ್ಥಾನದಲ್ಲಿ 1 ಗಂಟೆಯ ವೇಳೆ 41.53% ಶೇಕಡಾ ಮತದಾನವಾಗಿದೆ ಎಂದು ವಿವರಗಳು ಲಭ್ಯವಾಗಿವೆ.
ಮತಗಟ್ಟೆಯತ್ತ ಮತದಾರರು ಉತ್ಸಾಹದಿಂದ ಆಗಮಿಸುತ್ತಿದ್ದು,ಯುವ ಮತದಾರರು ಮತದಾನ ಮಾಡಲು ಹೆಚ್ಚಿನ ಆಸಕ್ತಿ ತೋರಿದ್ದಾರೆ.
ರಾಜಸ್ಥಾನದ ಅಂತರಾಷ್ಟ್ರೀಯ ಗಡಿ ರೇಖೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದ್ದು, ಹಲವೆಡೆ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿ ವ್ಯಾಪಕ ತಪಾಸಣೆ ನಡೆಸಲಾಗುತ್ತಿದೆ.
ಝಾಲರ್‌ಪಟನ್‌ನಲ್ಲಿ ಪಿಂಕ್ ಬೂತ್‌ನಲ್ಲಿ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ತಮ್ಮ ಹಕ್ಕು ಚಲಾಯಿಸಿದರು. ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವನ್ನು ಈ ವೇಳೆ ವ್ಯಕ್ತ ಪಡಿಸಿದರು.
ರಾಜಸ್ಥಾನ ಮತ್ತು ತೆಲಂಗಾಣದ ಹಲವೆಡೆ ಇವಿಎಂಗಳಲ್ಲಿ ತಾಂತ್ರಿಕ ದೋಷ ಕಂಡು ಬಂದು ಮತದಾನಕ್ಕೆ ವಿಳಂಬವಾಗಿರುವ ಬಗ್ಗೆಯೂ ವರದಿಗಳು ಬಂದಿವೆ.
ಗಣ್ಯರಿಂದ ಹಕ್ಕು ಚಲಾವಣೆ
ರಾಜಸ್ಥಾನದಲ್ಲಿ ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಠೊಡ್ ಅವರು ಜೈಪುರದ ವೈಶಾಲಿ ನಗರ್‌ನಲ್ಲಿ ಹಕ್ಕು ಚಲಾವಣೆ ಮಾಡಿದರು.
ತೆಲಂಗಾಣದಲ್ಲಿ ಪ್ರಖ್ಯಾತ ನಟರಾದ ಅಲ್ಲು ಅರ್ಜುನ್ , ಅಕ್ಕಿನೇನಿ ನಾಗಾರ್ಜುನ ಅವರು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿ ಮತ ಚಲಾಯಿಸಿದರು.
ಎಐಎಂಐಎಂನ ಅಕ್ಬರುದ್ದೀನ್ ಓವೈಸಿ ಅವರು ಹೈದರಾಬಾದ್‌ನ ಮೈಲಾರ ದೇವ ಪಳ್ಳಿಯಲ್ಲಿ ಹಕ್ಕು ಚಲಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.