ರಜನಿ ಪಕ್ಷದ ಆ್ಯಪ್ ಬಿಡುಗಡೆ
Team Udayavani, Jan 2, 2018, 9:55 AM IST
ಚೆನ್ನೈ: ರಾಜಕೀಯಕ್ಕೆ ಅಧಿಕೃತವಾಗಿ ಕಾಲಿಟ್ಟಿರುವ ತಮಿಳು ಸೂಪರ್ಸ್ಟಾರ್ ರಜನಿಕಾಂತ್, ತಮ್ಮ ಹೊಸ ಪಕ್ಷ ಸ್ಥಾಪನೆ ಕುರಿತಂತೆ ಮೊದಲ ಹೆಜ್ಜೆಯಿಟ್ಟಿದ್ದಾರೆ. ತಮ್ಮ ಉದ್ದೇಶಿತ ಸಂಘಟನೆಗಾಗಿ ‘ರಜನಿ ಮಂದ್ರಂ’ ಎಂಬ ಹೊಸ ವೆಬ್ಸೈಟ್ ಆರಂಭಿಸಿರುವ ಅವರು, ಆಸಕ್ತರು ತಮ್ಮ ಹೆಸರನ್ನು ‘ರಜನಿಕಾಂತ್ ಸಾರಿಗರ್ ಮಂದ್ರಂ (ಅಖೀಲ ಭಾರತ ರಜನಿಕಾಂತ್ ಅಭಿಮಾನಿಗಳ ಸಂಘ)’ದ ಅಡಿಯಲ್ಲಿ ನೊಂದಾಯಿಸಿಕೊಳ್ಳಲು ಕರೆ ನೀಡಿದ್ದಾರೆ.
ಆ್ಯಂಡ್ರಾಯ್ಡ ಮೊಬೈಲ್ಗಳ ಬಳಕೆದಾರರಿಗಾಗಿಯೂ ‘ರಜನಿ ಮಂದ್ರಂ’ ಹೆಸರಿನಲ್ಲೇ ಅಪ್ಲಿಕೇಷನ್ನೊಂದನ್ನು ಬಿಡುಗಡೆ ಮಾಡಲಾಗಿದ್ದು ಆ ಮೂಲಕವೂ ಹೆಸರನ್ನು ದಾಖಲಿಸಲು ಅನುವು ಮಾಡಿಕೊಡಲಾಗಿದೆ. ನೋಂದಾವಣಿಯಲ್ಲಿ ನಿರ್ದಿಷ್ಟ ಗುರಿ ತಲುಪಿದ ನಂತರ, ಈ ಸಂಘಟನೆಯನ್ನು ರಾಜಕೀಯ ಪಕ್ಷವಾಗಿ ಪರಿವರ್ತಿಸಲು ಆಲೋಚಿಸಿದ್ದಾರೆ. ಏತನ್ಮಧ್ಯೆ, ಹೆಸರು ನೊಂದಣಿ ಬಗ್ಗೆ ಒಂದು ನಿಮಿಷದ ವೀಡಿಯೋ ಕ್ಲಿಪ್ ಬಿಡುಗಡೆ ಮಾಡಿರುವ ಅವರು, ಅದರಲ್ಲಿ ತಮ್ಮ ರಾಜಕೀಯ ಪ್ರವೇಶ ನಿರ್ಧಾರ ಸ್ವಾಗತಿಸಿದವರಿಗೂ ಧನ್ಯವಾದ ಅರ್ಪಿಸಿದ್ದಾರೆ. ಬದಲಾವಣೆಗೆ ಆಸಕ್ತಿಯಿದ್ದವರು ತಮ್ಮ ಸಂಘಟನೆಯಲ್ಲಿ ಹೆಸರು ದಾಖಲಿಸಿಕೊಳ್ಳುವಂತೆ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.